ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಜೋಡುಗಾಯಿ ಒಡೆದ ಸಿದ್ದು-ಡಿ.ಕೆ.ಶಿ

ಮೈಸೂರು, ಮೇ, 09: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರ ನಡುವೆ ಮುನಿಸು ಇದೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಆದರೆ ಇದೀಗ ಅವರಿಬ್ಬರು ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಮೂಲಕ ಆಡಳಿತ ಪಕ್ಷದ ನಾಯಕರಿಗೆ ಠಕ್ಕರ್‌ ಕೊಟ್ಟಿದ್ದಾರೆ. ಅಲ್ಲದೆ ಇದೇ ವೇಳೆ ಸಿದ್ದು, ಡಿ.ಕೆ.ಶಿ ಇಬ್ಬರು ಜೋಡೆತ್ತುಗಳಂತೆ ಜೊತೆಗೂಡಿ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಜೋಡು ತೆಂಗಿನ ಕಾಯಿ ಒಡೆದು ಗಮನ ಸೆಳೆದಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸಿಎಂ ಗದ್ದುಗೆಗಾಗಿ ಹೊಡೆದಾಡಿಕೊಳ್ಳುತ್ತಾರೆ ಎಂದು ಟೀಕೆ ಮಾಡುತ್ತಿದ್ದರು. ಆದರೆ ಇದೀಗ ಇವರಿಬ್ಬರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಟೀಕಾಕಾರರಿಗೆ ಠಕ್ಕರ್‌ ನೀಡಿದ್ದಾರೆ.

Karnataka election 2023: Siddaramaiah, D.K.Sivakumar visits Chamundi Hills of Mysuru

ವರುಣ ಕಣದಿಂದ ಸ್ಪರ್ಧೆಗಿಳಿದಿರುವ ಸಿದ್ದರಾಮಯ್ಯ ಮತ್ತೊಂದೆಡೆ ಕನಕಪುರ ಕ್ಷೇತ್ರದಿಂದ ಸ್ಪರ್ಧೆಗಿಳಿದಿರುವ ಡಿ.ಕೆ.ಶಿವಕುಮಾರ್‌ ಅವರು ಇಂದು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅಲ್ಲದೆ ಬಿಜೆಪಿ ಅವರು ಇವರಿಬ್ಬರು ಸಿಎಂ ಪಟ್ಟಕ್ಕಾಗಿ ಕಚ್ಚಾಡುತ್ತಾರೆ ಇವರ ನಡುವೆ ಹೊಂದಾಣಿಕೆ ಇಲ್ಲ ಎನ್ನುವ ಮಾತುಗಳನ್ನು ಆಡಿದ್ದರು.

ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅದರಲ್ಲೂ ಸಿದ್ದರಾಮಯ್ಯನ ವಿರುದ್ಧ ಬಿಜೆಪಿಯವರು ಟೀಕಾಪ್ರಹಾರವನ್ನೇ ಮಾಡಿದ್ದಾರು. ಅಷ್ಟೇ ಅಲ್ಲದೆ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ನಡುವಿನ ಸರಿಯಿಲ್ಲ ಎನ್ನುವ ಮಾತುಗಳು ಕೇಳಿಬಂದುದ್ದವು. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಬಿಜೆಪಿಯವರು ಟೀಕಾಸ್ತ್ರವನ್ನು ಉಪಯೋಗಿಸಿದ್ದರು.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಇಂದು ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದರು. ದೇಗುಲದ ಪ್ರಧಾನ ಅರ್ಚಕರಾದ ಶಶಿಧರ ದೀಕ್ಷಿತ್ ಅವರು ಪೂಜೆ ಸಲ್ಲಿಸಿ ಮಂಗಳಾರತಿ, ಪ್ರಸಾದ ನೀಡಿದರು. ಈ ವೇಳೆ ಇಬ್ಬರು ನಾಯಕರು ತಮ್ಮ ಕ್ರಮ ಸಂಖ್ಯೆ ಇದ್ದ ಕಾರ್ಡ್‌ಗೆ ಪೂಜೆ ಸಲ್ಲಿಸಿದರು. ಈ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು

20 ನಿಮಿಷಕ್ಕೂ ಹೆಚ್ಚು ಕಾಲ ದೇಗುಲದಲ್ಲಿ ಉಭಯ ನಾಯಕರು ಕಾಲ ಕಳೆದರು. ಅಲ್ಲದೆ, ಸಿದ್ದರಾಮಯ್ಯ ಅವರು ಈಡಕಾಯಿ ಒಡೆದರು. ಚುನಾವಣೆಗೂ ಮುನ್ನ ದಿನ ಎಲ್ಲವೂ ಒಳಿತೇ ಆಗಲಿ ಎಂದು ಇಬ್ಬರು ನಾಯಕರು ದೇವಾಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ರಾಜ್ಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ಚುನಾವಣ ಅಧಿಕಾರಿಗಳು ಮತಗಟ್ಟೆಗಳ ಬಳಿ ಭರ್ಜರಿ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೆ ನಗರ ಪ್ರದೇಶಗಳಿಂದ ಮತದಾರರನ್ನು ಮತಗಟ್ಟೆಗೆ ತರಲು ಸಾರಿಗೆ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+