ಮೈಸೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಿಂದ 16 ನಾಮಪತ್ರಗಳ ಸಲ್ಲಿಕೆ

ಮೈಸೂರು, ಏಪ್ರಿಲ್‌, 13: ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಗುರುವಾರ (ಏಪ್ರಿಲ್‌ 13) ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 16 ನಾಮಪತ್ರಗಳು ಸ್ವೀಕೃತವಾಗಿವೆ.

1. 210-ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ವೆಂಕಟೇಶ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Karnataka elections 2023: 16 nomination Submited from 11 assembly constituencies in Mysuru district

2. 211-ಕೃಷ್ಣರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಪರಮೇಶ್ ನಾಮಪತ್ರ ಸಲ್ಲಿಸಿದ್ದಾರೆ.

3. 212-ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ತಿಮ್ಮಭೋವಿ ಹಾಗೂ ಬೀರೇಶ್ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

4. 216- ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿಯಾಗಿ ಸಂಧ್ಯಾಪಿ.ಎಸ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸೋಮ ಸಂದರ್ ಕೆ.ಎಸ್ ನಾಮಪತ್ರ ಸಲ್ಲಿಸಿದ್ದಾರೆ.

8. 213-ಹೆಗ್ಗಡದೇವನಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ರೂಪ ಎಸ್. ಅವರು ನಾಮಪತ್ರ ಸಲ್ಲಿಸಿದ್ದಾರೆ.

9. 215-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಎಂ.ಎಸ್. ಪ್ರವೀಣ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

10. 219-ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರವಿಕುಮಾರ್ ಎಂ ನಾಮಪತ್ರ ಸಲ್ಲಿಸಿದ್ದಾರೆ.

11. 218- ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಂದರ್ ಪ್ರೇಮ್‌ಕುಮಾರ್, ಜಾತ್ಯತೀತ ಜನತಾದಳ ಪಕ್ಷದಿಂದ ಆಯುಬ್ ಖಾನ್, ಆಮ್ ಆದ್ಮಿ ಪಕ್ಷದಿಂದ ಧರ್ಮದಶ್ರೀ ಹಾಗೂ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಅಬ್ದುಲ್ ಮಜೀದ್ ಕೆ.ಹೆಚ್ ನಾಮಪತ್ರ ಸಲ್ಲಿಸಿದ್ದಾರೆ.

ಮತ್ತೊಂದೆಡೆ ಟಿ ನರಸೀಪುರ, ಚಾಮರಾಜ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

9 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಅದೇ ರೀತಿ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ, ನಾಮಪತ್ರ ಸಲ್ಲಿಸಲು ಇಂದು ಮೊದಲನೇ ದಿನವಾಗಿದೆ. ಆದರೆ ಮಳವಳ್ಳಿ ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ. ಉಳಿದ 05 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 09 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆಯಾಗಿವೆ.

09 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಮಂಜುನಾಥ ಜಿ.ಬಿ ಹಾಗೂ ಪ್ರಕಾಶ್.ಸಿ ಪಕ್ಷೇತರ ಅಭ್ಯರ್ಥಿಗಳಾಗಿ, ಮೇಲುಕೋಟೆ ಕ್ಷೇತ್ರದಿಂದ ಪಿ.ವಿ.ಸುಂದ್ರಮ್ಮ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಮಹೇಂದ್ರ ಕುಮಾರ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ, ಶ್ರೀರಂಗಪಟ್ಟಣದಲ್ಲಿ ಮೋಹನ್‌ ಕುಮಾರ್ಕಿರಂಗೂರು ಪಾಪು 2 ನಾಮಪತ್ರಗಳನ್ನು ಪಕ್ಷೇತರ ಅಭ್ಯರ್ಥಿಯಾಗಿ, ಅರುಣ್‌ಕುಮಾರ್.ಹೆಚ್.ಎಂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.

ಅದೇ ರೀತಿಯಲ್ಲಿ ನಾಗಮಂಗಲ ಕ್ಷೇತ್ರದ ಯೋಗೇಶ್‌ ಪಕ್ಷೇತರರಾಗಿ, ಜಿ.ಎಂ.ರಮೇಶ್ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ, ಕೆ.ಆರ್‌. ಪೇಟೆಯಲ್ಲಿ ಕಿಶೋರ್‌ ಎ.ಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಒಂದೊಂದು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಏಪ್ರಿಲ್ 21ರಂದು ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನಾಂಕವಾಗಿದ್ದು, ಮತದಾನವು ಮೇ 10ರಂದು ಹಾಗೂ ಮತ ಎಣಿಕೆಯು ಮೇ 13ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+