Siddaramaiah Nomination: ಜನಪರ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಂಕಲ್ಪ: ಇಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏಪ್ರಿಲ್. 19: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಿಗಳಲ್ಲಿ ಭಾರೀ ಕುತೂಹಲಕ್ಕೆ ಕಾರಣರಾದವರು ಸಿದ್ದರಾಮಯ್ಯ. ಅವರ ಕ್ಷೇತ್ರ ಆಯ್ಕೆ ವಿಚಾರವೇ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿತ್ತು. ಎಲ್ಲಿಂದ ಸ್ಪರ್ಧೆ ಎಂಬ ಪ್ರಶ್ನೆ ಕಳೆದ ಮೂರು, ನಾಲ್ಕು ತಿಂಗಳ ಕಾಲ ಜನರನ್ನು, ಪ್ರತಿಪಕ್ಷಗಳನ್ನು ಕಾಡಿದ್ದು ಸುಳ್ಳಲ್ಲ. ಕೊನೆಗೂ ಅವರ ವರುಣಾ ಸ್ವರ್ಧಿಸುತ್ತಿದ್ದಾರೆ.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿತ್ತು. ಹೀಗಾಗಿ ಕೋಲಾರಕ್ಕೆ ಗುಡ್ ಬೈ ಹೇಳಿ ವರುಣಾದತ್ತ ಮುಖ ಮಾಡಿದ್ದಾರೆ. ಬುಧವಾರ ಏಪ್ರಿಲ್ 19 ರಂದು ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.

Karnataka Elections 2023: Siddaramaiah to file nomination from Varuna Constituency

"ಭ್ರಷ್ಟ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆದು 'ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಜನಪರ ಕಾಂಗ್ರೆಸ್ ಸರ್ಕಾರ' ವನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಮತ್ತು ಬೆಂಬಲವಿರಲಿ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ ನಾನು ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಕ್ಷೇತ್ರದ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು..?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ, ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ" ಎಂದು ತನ್ನ ಕ್ಷೇತ್ರದ ಜನರ ಬಗ್ಗೆ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿಕಾರಿದ್ದರು. " ಈ ಬಾರಿ ರಾಜ್ಯದಲ್ಲಿ 100 ಕ್ಕೆ 200 ರಷ್ಟು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 60 ಸೀಟುಗಳನ್ನು ದಾಟುವುದಿಲ್ಲ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿ ಹಿರಿಯ ನಾಯಕರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಹಿರಿಯ ನಾಯಕರನ್ನೇ ಕಡೆಗಣಿಸಿರುವುದು ಬಿಜೆಪಿಗೆ ಹಿನ್ನೆಡೆ ಆಗಲಿದೆ. ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ" ಎಂದಿದ್ದರು.

ಮುಂದುವರಿದು, "ನಾನು ವರುಣಾ ಕ್ಷೇತ್ರದ ಮನೆ ಮಗನಾಗಿದ್ದೇನೆ. ಬಿಜೆಪಿಯ ಯಾವ ತಂತ್ರವೂ ಇಲ್ಲಿ ಉಪಯೋಗಕ್ಕೆ ಬರುವುದಿಲ್ಲ. ನಾನು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಜನರ ಜೊತೆ ಸದಾ ಒಡನಾಟದಲ್ಲಿದ್ದೇನೆ. ಬಿಜೆಪಿಯವರು ಚುನಾವಣೆ ಸಮಯದಲ್ಲಿ ಬಂದು ಆಶ್ವಾಸನೆ ನೀಡುತ್ತಿದ್ದಾರೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಉತ್ತರ ಕೊಡಲಿದ್ದಾರೆ" ಎಂದು ಸಿದ್ದರಾಮಯ್ಯ ಹೇಳಿದ್ದರು.

ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಸತಿ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಇವರಿಗೆ ಪ್ರಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಸಾಥ್ ನೀಡುತ್ತಿದ್ದಾರೆ. ಮಂಗಳವಾರ ಪ್ರಚಾರಕ್ಕೆ ತೆರಳಿದ್ದ ಅಭ್ಯರ್ಥಿ ವಿ.ಸೋಮಣ್ಣಗೆ ಕ್ಷೇತ್ರದ ಜನತೆ ನಮ್ಮ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಮಾಡಿದ್ದಿರಿ ಎಂದು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+