ಕೃಷ್ಣರಾಜ ಅಭ್ಯರ್ಥಿ ರಾಮದಾಸ್ ಪರ ಬ್ಯಾಟ್ ಬೀಸಿದ ವಿಜಯೇಂದ್ರ
ಮೈಸೂರು, ಮೇ 1 : ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಲು ಮಾಜಿ ಸಚಿವ ಹಾಗೂ ಕೆ.ಆರ್. ಕ್ಷೇತ್ರದ ಅಭ್ಯರ್ಥಿ ಎಸ್.ಎ. ರಾಮದಾಸ್ ಕಾರಣ ಎಂಬ ಆರೋಪಗಳಿಗೆ ಖುದ್ದು ವಿಜಯೇಂದ್ರರವರೇ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸಿರುವ ವಿಜಯೇಂದ್ರ ಅವರು, ಸಮುದಾಯದವರು ಹಾಗೂ ಪ್ರತಿಯೊಬ್ಪರೂ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ಎಸ್.ಎ. ರಾಮದಾಸ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಯಡಿಯೂರಪ್ಪನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರೈಸಬೇಕು. ಅಷ್ಟೇ ಅಲ್ಲ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್ ಪರವಾದ ಅಲೆಯಿದ್ದು ಅಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಈ ಮಧ್ಯೆ ಕೆಲ ಕಾಂಗ್ರೆಸ್ಸಿಗರು ಸಮುದಾಯದ ಹೆಸರು ಹೇಳಿಕೊಂಡು ಇನ್ನಿಲ್ಲದ ವದಂತಿ ಹಬ್ಬಿಸುತ್ತಿದ್ದಾರೆ. ಲಿಂಗಾಯತ- ವೀರಶೈವ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್‍ನವರ ಮಾತುಗಳಿಗೆ ಸಮುದಾಯದ ಯಾರೊಬ್ಬರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ನೋಟಾ ಕುರಿತಂತೆ ಎಚ್ಚರಿಕೆಯ ನಿರ್ಧಾರ ಕೈಗೊಳ್ಳಲು ಸಲಹೆ :
ವರುಣಾ ಕ್ಷೇತ್ರದಲ್ಲಿ ನೋಟಾ ಪ್ರಯೋಗ ಅಭಿಯಾನದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದ್ದು ಬಿಜೆಪಿ ಕಾರ್ಯಕರ್ತರು ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕೆಂದು ಬಿಜೆಪಿ ವರುಣ ಕ್ಷೇತ್ರದ ಸಂಭವನೀಯ ಅಭ್ಯರ್ಥಿಯಾಗಿದ್ದ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.
ಕೆಲವು ಶಕ್ತಿಗಳು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗದಂತೆ ತಡೆಯಲು ಅಪಪ್ರಚಾರ ಮಾಡಿ, ಗೊಂದಲ ಸೃಷ್ಟಿಸಿ ತೊಂದರೆ ಕೊಡಲು ಪಿತೂರಿ ನಡೆಸುತ್ತಿವೆ. ಆದ್ದರಿಂದ ಯಾವುದೇ ಅಪಪ್ರಚಾರಗಳಿಗೆ ಪ್ರಚೋದನೆಗೊಳ್ಳಗಾಗಬಾರದು.

ಸೇವ್ ಬಿಜೆಪಿ ಅಭಿಯಾನ:
ವರುಣಾ ಕ್ಷೇತ್ರದ ನೊಂದ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ 'ಬಿಜೆಪಿ ಉಳಿಸಿ' ಅಭಿಯಾನ ಆರಂಭವಾಗಿದ್ದು, ಪಕ್ಷದ ಕೆಲ ಮುಖಂಡರ ವಿರುದ್ಧ ಘೋಷಣೆಗಳಿರುವ ಕರಪತ್ರಗಳು ವೈರಲ್ ಆಗಿವೆ.
ಒಡೆದು ಆಳುವ ಅನಂತಕುಮಾರ್ ಮತ್ತು ಸಂತೋಷ್ ಅವರನ್ನು ವಜಾಗೊಳಿಸಿ ಎಂದು ಬರೆದಿರುವ ಕರಪತ್ರಗಳನ್ನು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಕಾನೂನು ಗೌರವಿಸಿ, ಕಾನೂನು ಕೈಗೆತ್ತಿಕೊಳ್ಳುವುದು ಬೇಡ, ಹೋರಾಟ ಶಾಂತವಾಗಿರಲಿ. ಮೋದಿ, ಅಮಿತ್ ಶಾ ಅವರಿಗೆ ತಲುಪುವವರೆಗೆ ಪ್ರತಿಭಟನೆ ನಡೆಸಿ ಎಂಬ ಅಂಶಗಳು ಇದರಲ್ಲಿವೆ. ಕರಪತ್ರದ ಕೊನೆಯಲ್ಲಿ ವರುಣಾ ಕ್ಷೇತ್ರದ ನೊಂದ ಬಿಜೆಪಿ ಕಾರ್ಯಕರ್ತರು ಎಂದು ಬರೆಯಲಾಗಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಸಹ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿ.ವೈ. ವಿಜಯೇಂದ್ರ ಅವರ ಕೆಲ ಬೆಂಬಲಿಗರು ಈ ಇಬ್ಬರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ್ದಾರೆ..
ಜಾಥಾ ನಡೆಸುತ್ತಿದ್ದವರ ಬಂಧನ :
ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೋಟಾಕ್ಕೆ ಮತ ಚಲಾಯಿಸುವಂತೆ ಮತದಾರರನ್ನು ಸೆಳೆಯಲು ಬೈಕ್ ಜಾಥಾ ನಡೆಸುತ್ತಿದ್ದ ಇಬ್ಬರ ವಿರುದ್ಧ ಚುನಾವಣಾಧಿಕಾರಿ ನೀಡಿದ ದೂರನ್ನಾಧರಿಸಿ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ದಿಂದ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅನುಮತಿ ಪಡೆಯದೆ ಬೈಕ್ ಜಾಥಾ ಮೂಲಕ ನೋಟಾ ಅಭಿಯಾನ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸೆಕ್ಟರ್ ಅಧಿಕಾರಿಗಳ ತಂಡ ಗುಂಪಿನಲ್ಲಿ ತೆರಳುತ್ತಿದ್ದ ಇಬ್ಬರನ್ನು ಪೊಲೀಸರ ನೆರವಿನೊಂದಿಗೆ ವಶಕ್ಕೆ ಪಡೆದು ನಂತರ ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications