ಮತಕ್ಕಾಗಿ ಕೋಳಿ ಹಂಚಿಕೆ, ಬಾಡೂಟ: ಪ್ರಕರಣ ದಾಖಲು
ಮೈಸೂರು: ಚುನಾವಣಾ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ತಮಗೆ ತೋಚಿದ ತಂತ್ರಗಳನ್ನೆಲ್ಲ ಮಾಡುತ್ತಿದ್ದಾರೆ.
ಮತದಾರರಿಗೆ ಆಮಿಷವೊಡ್ಡಲು ಕೋಳಿ, ಹಣ ಹಂಚುವುದು, ಬಾಡೂಟ ಹಾಕುವುದು ಜೋರಾಗಿದೆ.
ಈಗಾಗಲೇ ಈ ಸಂಬಂಧ ಚುನಾವಣಾಧಿಕಾರಿಗಳು ಹಲವು ಕಡೆ ಅಭ್ಯರ್ಥಿಗಳ ಆಟಾಟೋಪಕ್ಕೆ ಕಡಿವಾಣ ಹಾಕಿದ್ದು, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಕೋಳಿಗಳನ್ನು ಹಂಚುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ನಾಗಮಂಗಲ ತಾಲೂಕಿನ ಗೌಡಹಳ್ಳಿ-ಕಾವಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಪಕ್ಷದ ಪರವಾಗಿ ಹಂಚಲು ತಂದಿದ್ದ ಸುಮಾರು 30ಕ್ಕೂ ಹೆಚ್ಚು ಕೋಳಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋಳಿಗಳ ಸರಬರಾಜು ಕುರಿತು ಆಟೋ ಚಾಲಕನಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಇನ್ನೊಂದೆಡೆ ಅನುಮತಿ ಪಡೆಯದೆ ಬಾಡೂಟ ಹಾಕಿದ ಸುಮಾರು 25 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚುನಾವಣಾ ಆಯೋಗ ಮೊಕದ್ದಮೆ ದಾಖಲು ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಹೋಬಳಿಯ ಗೊರಹಳ್ಳಿ ಗ್ರಾಮದಲ್ಲಿ ನಡೆದಿದೆ.












Click it and Unblock the Notifications