ಮೈಸೂರು: ಕಾಂಗ್ರೆಸ್ –ಜೆಡಿಎಸ್ ಕಾರ್ಯಕರ್ತರಲ್ಲಿ ಮಾರಾಮಾರಿ
ಮೈಸೂರು, ಮೇ 10 : ಮೈಸೂರಿನಲ್ಲಿ ಕಾರ್ಯಕರ್ತರ ನಡುವಿನ ಗಲಾಟೆ ಮುಂದುವರೆದಿದೆ. ಮತದಾನಕ್ಕೆ ಇನ್ನು ಎರಡು ದಿನಗಳು ಬಾಕಿ ಇರುವಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಕಿತ್ತಾಟ ನಡೆದಿದೆ.
ಜಿಲ್ಲೆಯ ಕೆ. ಆರ್ ನಗರದಲ್ಲಿನ ಕಾಮೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಪ್ರಚಾರ ಮಾಡುವ ವೇಳೆ ಗಲಾಟೆ ನಡೆದಿದ್ದು ಹಲ್ಲೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ.

ಶಾಸಕ ಸಾ. ರಾ ಮಹೇಶ್ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮಿಗೌಡ ಪುತ್ರ ಡಿ ರವಿಶಂಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.












Click it and Unblock the Notifications