ಬಿಎಸ್‌ವೈಗೆ ತಲೆ ಕೆಟ್ಟಿದೆ, ಕಾಂಗ್ರೆಸ್‌ಗೆ 120 ಸ್ಥಾನ : ಸಿದ್ದರಾಮಯ್ಯ

ಮೈಸೂರು, ಮೇ 12 : 'ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 120ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಯಡಿಯೂರಪ್ಪ ಅವರಿಗೆ ತಲೆ ಕೆಟ್ಟಿದೆ. ನಾನು ವಿಶ್ವಾಸದಿಂದ ಇದ್ದೇನೆ, ಕಾಂಗ್ರೆಸ್ 120ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ಎರಡೂ ಕಡೆ ಅವರು ಮತದಾನ ಮಾಡುತ್ತಿಲ್ಲ.

Karnataka elections : Congress will get more than 120 seats says Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ವೋಟನ್ನು ತಮಗೇ ಹಾಕಿಕೊಳ್ಳದ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿದೆ.

ಸಿದ್ದರಾಮನ ಹುಂಡಿ ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಈ ಹಿಂದೆ ತಾವು ವರುಣಾದಲ್ಲಿ ಸ್ಫರ್ಧಿಸುತ್ತಿದ್ದ ಸಿದ್ದರಾಮಯ್ಯ ಮತಚಲಾವಣೆ ಮಾಡುತ್ತಿದ್ದರು. ಆದರೆ, ಈ ಬಾರಿ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+