ಸಿದ್ದರಾಮಯ್ಯ ಪರ ಚಾಮುಂಡೇಶ್ವರಿಯಲ್ಲಿ ದರ್ಶನ್ ಪ್ರಚಾರ

ಮೈಸೂರು, ಮೇ 05: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು(ಮೇ 05) ಪ್ರಚಾರ ನಡೆಸಿ, ಮತಯಾಚಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್ ಪರ ಪ್ರಚಾರ ಆರಂಭಿಸುವ ದರ್ಶನ್ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗುತ್ತಿದ್ದ ಘಟನೆ ಕಂಡುಬಂತು.

ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ 'ಚಕ್ರವರ್ತಿ' ಖ್ಯಾತಿಯ ದರ್ಶನ್ ಪ್ರಚಾರ ನಡೆಸಿ, ತಮ್ಮ ಅಭಿಮಾನಿಗಳೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ಮತ ಹಾಕಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಕಾವೇರಿ ಹೋರಾಟಕ್ಕೂ ನನ್ನ ಬೆಂಬಲವಿದೆ ಎಂದು ದರ್ಶನ್ ಹೇಳಿದರು.

Karnataka Elections: Darshan campaigns for Siddaramaiah in Chamundeshwari

ಪ್ರತಿಭಟನೆ ನಡೆಸಲು ಆರಂಭಿಸಿದ ಜೆಡಿಎಸ್ ಕಾರ್ಯಕರ್ತರನ್ನು ತಡೆದ ಪೊಲೀಸರು, ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಹೇಳಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ ಟಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾಮಂಗ್ರೆಸ್ ಮುಖಂಡ ಅಂಬರೀಶ್ ಗೆ ಜೈಕಾರ ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+