ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷ ಲಕ್ಷ ರೂ ಅಕ್ರಮ ಹಣ ಪತ್ತೆ
ಮೈಸೂರು, ಮೇ 05: ಚಾಮುಂಡೇಶ್ವರಿ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನದಲ್ಲಿ ದಾಖಲೆ ಇಲ್ಲದೆ ಹಣ ಸಾಗಣೆಗೆ ಸಂಬಂಧಿಸಿದಂತೆ ಒಟ್ಟು 5.42 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮೈದನಹಳ್ಳಿಯಲ್ಲಿ ಚುನಾವಣಾ ತಪಾಸಣಾ ಸಿಬ್ಬಂದಿ ವಾಹನ ತಪಾಸಣೆ ಮಾಡಿದ ಸಂದರ್ಭ ವಾಹನಗಳಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂತು. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3.06 ಲಕ್ಷ ರೂ. ಹಾಗೂ 2.36 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಯಿತು.

ಯಾವುದೇ ದಾಖಲೆ ಇಲ್ಲದೆ ಕೆ.ಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ 50 ಲಕ್ಷ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಸಹ ನಡೆದಿದೆ.












Click it and Unblock the Notifications