ವಿಜಯೇಂದ್ರ ಪರ ಹೆಚ್ಚಾಗಿದೆ ಬ್ಯಾಟಿಂಗ್, ಜಿ.ಪಂ ಸದಸ್ಯರ ರಾಜೀನಾಮೆ
ಮೈಸೂರು, ಏಪ್ರಿಲ್ 23: ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ವರುಣಾದಿಂದ ಬಿಜೆಪಿ ಟಿಕೆಟ್ ನಿರಾಕರಿಸುತ್ತಿದ್ದಂತೆ ಮೈಸೂರು ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಜನಪ್ರತಿನಿಧಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಿದ ಬೆನ್ನಲ್ಲೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿ ಬಿಜೆಪಿ ಸಮಾವೇಶದ ವೇದಿಕೆಗೆ ನುಗ್ಗಿ ಕುರ್ಚಿಗಳನ್ನು ಪುಡಿ ಮಾಡಿದ್ದರು. ವಿಜಯೇಂದ್ರ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಈಗಲೂ ಪ್ರತಿಭಟನೆ ಮುಂದುವರೆದಿದ್ದು ಮೈಸೂರಿನ ಬಿಜೆಪಿ ಜನಪ್ರತಿನಿಧಿಗಳು ವಿಜಯೇಂದ್ರಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಶ್, ಕೇಂದ್ರ ಸಚಿವ ಅನಂತ್‌ಕುಮಾರ್, ಪ್ರತಾಪ್ ಸಿಂಹ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿಯ ಮೂವರು ಜಿಲ್ಲಾ ಪಂಚಾಯಿತಿ ಸದಸ್ಯರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ ಮಾಜಿ ಶಾಸಕ ರಾಮದಾಸ್ ಕೂಡ ವಿಜಯೇಂದ್ರಗೆ ವರುಣಾ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದು, 'ಕಾರ್ಯಕರ್ತರು ರಾಜಿನಾಮೆ ನೀಡಿದರೆ ನಾನೂ ಬಿಜೆಪಿಗೆ ರಾಜಿನಾಮೆ ನೀಡುತ್ತೇನೆ' ಎಂದಿದ್ದಾರೆ.
ಈ ನಡುವೆ ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಸಮಾಧಾನದಿಂದ ವರ್ತಿಸುವಂತೆ ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ವರುಣಾ ಟಿಕೆಟ್ ನೀಡಲಾಗದಿದ್ದಕ್ಕೆ ಯಡಿಯೂರಪ್ಪ ಅವರು ಕಾರ್ಯಕರ್ತರ ಕ್ಷಮೆ ಯಾಚಿಸಿದ್ದಾರೆ.












Click it and Unblock the Notifications