ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ
Recommended Video

ಸಿದ್ದರಾಮಯ್ಯ ಹಾಗು ಜಿ ಟಿ ದೇವೇಗೌಡರಿಂದ ಇಂದು 12 ಗಂಟೆಗೆ ನಾಮಪತ್ರ ಸಲ್ಲಿಕೆ | Oneindia Kannada
ಮೈಸೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭೆ ಚುನಾವಣೆಯ ಅತ್ಯಂತ ಮಹತ್ವದ ಕ್ಷೇತ್ರ ಎನ್ನಿಸಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಇಬ್ಬರು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಜಿಟಿ ದೇವೇಗೌಡ ಅವರು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಇಂದು ಮಧ್ಯಾಹ್ನ 12 ಗಂಟೆಗೆ ತಮ್ಮ ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಮೈಸೂರಿನ ನಜರ್ ಬಾದ್ ನಲ್ಲಿರುವ ಮಿನಿ ವಿಧಾನಸೌಧದಲ್ಲಿ ಉಭಯ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ಕುತೂಹಲವನ್ನೂ ಕೆರಳಿಸಿರುವ ಈ ಕ್ಷೇತ್ರದಲ್ಲಿ ಘಟಾನುಘಟಿಗಳ ನಾಮಪತ್ರ ಸಲ್ಲಿಕೆಗೆ ಅವರ ಅಪಾರ ಬೆಂಬಲಿಗರು ಸಾಕ್ಷಿಯಾಗಲಿದ್ದಾರೆ. ತನ್ನಿಮಿತ್ತ ಮಿನಿ ವಿಧಾನಸೌಧದ ಬಳಿ ಭಾರೀ ಪೊಲೀಸ್ ಬಿಗಿ ಬಂದೊಬಸ್ತ್ ಏರ್ಪಡಿಸಲಾಗಿದೆ.












Click it and Unblock the Notifications