ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಪಕ್ಷೇತರ ಅಭ್ಯರ್ಥಿ
ಮೈಸೂರು, ಮೇ 12: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯದಾದ್ಯಂತ ಮತದಾನ ನಡೆಯುತ್ತಿದೆ. ಮೈಸೂರಿನ ಕೆ ಆರ್ ನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಎಂಬುವವರು ಅಂಬೆಲೆನ್ಸ್ ನಲ್ಲಿ ಬಂದು ಮತದಾನ ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುವ ಹೊಸಹಳ್ಳಿ ವೆಂಕಟೇಶ್ ಅವರು ಮೇ 10 ರಂದು ಪ್ರಚಾರ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಇದರಿಂದ ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಸಹ ಆಸ್ಪತ್ರೆಯಲ್ಲಿಯೇ ಇದ್ದ ಅವರು ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆಯಿಂದ ಅಂಬುಲೆನ್ಸ್ ನಲ್ಲಿ ಹೊಸಹಳ್ಳಿಗೆ ಆಗಮಿಸಿ ಮತದಾನದಲ್ಲಿ ಭಾಗಿಯಾದರು. ಈ ಮೂಲಕ ಮತದಾನದ ಮಹತ್ವವನ್ನು ಸಾರಿಹೇಳಿದರು.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಕರ್ನಾಟಕದಲ್ಲಿ 222 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications