ಖಜಾನೆ ಬರಿದು ಎನ್ನುವ ಬಿಎಸ್ವೈ ಚಿಲ್ಲರೆ ರಾಜಕೀಯ ಬಿಡಲಿ: ಎಚ್ದಿಕೆ

ಮೈಸೂರು, ಆ,11: 'ರಾಜ್ಯದಲ್ಲಿ ನೆರೆ ನಿರ್ವಹಣೆ ಮಾಡುವ ವಿಚಾರದಲ್ಲಿ ಸರ್ಕಾರಕ್ಕೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ' ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಮೈಸೂರಿನ ಮಳೆ ಹಾನಿ ಪ್ರದೇಶಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ನಗರದ ಸರಸ್ವತಿಪುರಂನಲ್ಲಿ ಕುಸಿದು ಬಿದ್ದಿದ್ದ ಅಗ್ನಿಶಾಮಕ ದಳ ಕಟ್ಟಡವನ್ನ ಹೆಚ್.ಡಿ ಕುಮಾರಸ್ವಾಮಿ ವೀಕ್ಷಣೆ ಮಾಡಿದರು.

ಬಳಿಕ ಮಾತನಾಡಿದ ಕುಮಾರಸ್ವಾಮಿ, 'ರಾಜ್ಯದ ನೆರೆ ನಿರ್ವಹಣೆ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಅನಗತ್ಯವಾಗಿ ಟೀಕೆ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಜನರ ಸಂಕಷ್ಟದಲ್ಲಿದ್ದಾರೆ. ನೊಂದವರಿಗೆ ನೆರವಾಗುವುದೇ ಮೊದಲ ಆದ್ಯತೆ' ಎಂದರು.

Karnataka Government Financial Situation Stable: Former CM HD Kumraswamy Statement

'ರಾಜ್ಯ ಸರ್ಕಾರದ ಖಜಾನೆ ಸುಸ್ಥಿರವಾಗಿದೆ. 8 ಸಾವಿರ ಕೋಟಿಯನ್ನ ಮೀಸಲಿಟ್ಟಿದ್ದೇನೆ. ಹಣಕಾಸು ಸ್ಥಿತಿ ಸರಿಯಲ್ಲ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಸರಿಯಲ್ಲ. ಯಡಿಯೂರಪ್ಪ ಈ ವಿಚಾರದಲ್ಲಿ ಚಿಲ್ಲರೆ ರಾಜಕೀಯ ಬಿಡಬೇಕು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ನೆರೆ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು' ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಇನ್ನೆರಡು ದಿನಗಳಲ್ಲಿ ಮೈಸೂರಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು. ಋಣಮುಕ್ತ ಕಾಯಿದೆ ಜಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ಸರ್ಕಾರ ಕೂಡಲೇ ಯೋಜನೆ ಜಾರಿಗೆ ಮುಂದಾಗಬೇಕು.

'90 ದಿನದೊಳಗೆ ಯೋಜನೆ ಜಾರಿಯಾಗಬೇಕು. ಈಗಾಗಲೇ 10 ದಿನ ಕಳೆದಿದೆ. ಯೋಜನೆ ಬಗ್ಗೆ ಹಳ್ಳಿಗಳಲ್ಲಿ ಢಂಗುರ ಸಾರುವ ಕೆಲಸ ಆಗಬೇಕು. ಈ ಬಗ್ಗೆ ಶೀಘ್ರದಲ್ಲೇ ಜೆಡಿಎಸ್ ಕಾರ್ಯಕರ್ತರ ಮೂಲಕ ಪ್ರಚಾರ ಮಾಡಿಸುತ್ತೇನೆ' ಎಂದು ಕುಮಾರಸ್ವಾಮಿ ಹೇಳಿದರು.

'ರಾಜ್ಯ ಸರಕಾರದ ಖಚಾನೆಯ ಸ್ಥಿತಿಯ ಬಗ್ಗೆ ಮಾತನಾಡುವುದಕ್ಕಿಂತ ಸುಮ್ಮನಿರುವುದೇ ಸೂಕ್ತ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+