Mysuru: ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆಗ್ರಹ; ರಾಜ್ಯಪಾಲರಿಗೆ ಪತ್ರ ಚಳವಳಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಗಳು ಶನಿವಾರ ಪತ್ರ ಚಳವಳಿ ನಡೆಸಿದವು. ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಕಾಂಗ್ರೆಸ್ ಬೆಂಬಲಿಗರನ್ನು ಕೆರಳಿಸಿದ್ದು, ರಾಜ್ಯಪಾಲರ ಮುಂದಿರುವ ಇತರ ದೂರುಗಳಿಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಒತ್ತಾಯಿಸಿವೆ.

ಮೈಸೂರು ನಗರದ ರಾಮಸ್ವಾಮಿ ವೃತ್ತದ ಪೋಸ್ಟ್ ಬಾಕ್ಸ್ ಹತ್ತಿರ ಸೇರಿದ ಸಂಘಟನೆ ಸದಸ್ಯರು ರಾಜ್ಯದ ಮಾಜಿ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ್ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕೆಂದು ಆಗ್ರಹಿಸಿದ್ದಾರೆ.

Karnataka Groups Demand Prosecution of HD Kumaraswamy

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪರ ನಿಲುವು ಹೊಂದಿದ್ದು, ಪಕ್ಷಪಾತ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ 'ರಾಜ್ಯಪಾಲರೇ ರಾಜ್ಯ ಬಿಟ್ಟು ತೊಲಗಿ' ಎಂಬ ಚಳವಳಿಯನ್ನು ಹಮ್ಮಿಕೊಳ್ಳಲಾಗುತ್ತದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನುಬಾಹಿರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ತನಿಖೆಯೇ ಆರಂಭವಾಗದ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ 8-10 ತಿಂಗಳುಗಳಿಂದ ಲೋಕಾಯುಕ್ತ ಮತ್ತು ಎಸ್‌ಐಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಮನವಿ ಮಾಡಿದ್ದರೂ ಇದುವರೆಗೂ ಅನುಮತಿ ನೀಡಿಲ್ಲ. ಆರೋಪಗಳ ಹಿನ್ನೆಲೆಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+