• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದ ತೀರ್ಪಿನ ನಂತರ ಚರ್ಚೆ: ಸಿಎಂ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನ.28: ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದ ತೀರ್ಪು ನವೆಂಬರ್ 30 ರಂದು ಬರುತ್ತದೆ. ಆ ತೀರ್ಪಿನ ಸಾಧಕ ಬಾಧಕಗಳ ಬಗ್ಗೆ ಪೂರ್ವ ಚರ್ಚೆಯನ್ನು ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಸಂಜೆ ದೆಹಲಿಗೆ ತೆರಳುತ್ತಿದ್ದು, ಈ ವೇಳೆ ಗಡಿ ವಿವಾದದ ಬ್ಗಗೆ ಚರ್ಚೆ ನಡೆಸುತ್ತೇವೆ. ಅದರ ಜೊತೆಗೆ ಬೇರೆ ಬೇರೆ ವಿಚಾರಗಳು ಚರ್ಚೆಯಾಗುತ್ತವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ದೆಹಲಿ ಹೋಗುತ್ತಿದ್ದೇನೆ. ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಒಕ್ಕಲಿಗರ ಮೀಸಲಾತಿ ವಿಚಾರ ಬಗ್ಗೆ ಮಾತನಾಡಿದ ಅವರು, ಡೆಡ್ ಲೈನ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಅವರ ಪತ್ರ ನನ್ನ ಕೈ ಸೇರಲಿ. ಮುಂದೆ ಏನೂ ಮಾಡಬೇಕೆಂದು ನಿರ್ಧಾರ ಮಾಡುತ್ತೇನೆ. ನನಗೆ ರಾಜಕೀಯ ಒತ್ತಡ ಇರುವುದು ಸತ್ಯ. ‌ ನಾನು ಎಲ್ಲಾ ಪಕ್ಷಗಳ ಹಿತ ಕಾಯಬೇಕಿದೆ. ಆ ಕಾರಣಕ್ಕೆ ನಾನು ಎಲ್ಲಾ ರೀತಿಯ ಆಲೋಚನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಕೇಂದ್ರದಿಂದ ಯಾರೂ ನನ್ನೊಂದಿಗೆ ಸಮಾಲೋಚನೆ ಮಾಡಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕೆಂದು ನಮ್ಮ ಪಕ್ಷದ 30 ವರ್ಷಗಳ ನಿಲುವು. ಈ ಬಗ್ಗೆ ನಾನು ಸಹ ಎಲ್ಲಾ ರೀತಿಯ ಮಾಹಿತಿ ಕಲೆ ಹಾಕುತ್ತಿದ್ದೇನೆ. ಈ ಬಗ್ಗೆ ಮುಂದಿನ‌ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

Karnataka-Maharashtra Border Row: Discussion Will Held After Verdict; Bommai

ಇದೇ ವೇಳೆ ವೆಬ್‌ಸೈಟ್ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಪಡೆಯುತ್ತಿರುವ ಸಾಕಷ್ಟು ವೆಬ್‌ಸೈಟ್ ಬಗ್ಗೆ ಮಾಹಿತಿ ಬಂದಿದೆ. ಅವುಗಳ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಈಗ ಮತದಾರ ಪಟ್ಟಿ ಪರಿಷ್ಕರಣೆ ತನಿಖೆ ಕೂಡ ನಡೆಯುತ್ತಿದೆ. ಅದರ ಜೊತೆಯಲ್ಲಿ ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Karnataka-Maharashtra border issue: Chief Minister Basavaraj Bommai says will discuss this issue after the verdict. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X