ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಯಂ ಕ್ವಾರಂಟೈನ್ ಗೆ ಒಳಗಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

|
Google Oneindia Kannada News

ಮೈಸೂರು, ಜುಲೈ 7: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮೈಸೂರಿನ ತಮ್ಮ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಪ್ರಕರಣದಿಂದಾಗಿ, ಮುಂಜಾಗೃತಾ ಕ್ರಮವಾಗಿ ಟಿ.ಕಾಟೂರಿನ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

Recommended Video

ಕಪ್ಪು ಪಟ್ಟಿ ಕಟ್ಟಿಕೊಂಡು ಬೀದಿಗೆ ಬಂದ ಡಾಕ್ಟರ್ ಮತ್ತು ನರ್ಸ್ ಗಳು | Oneindia Kannada

ಸಿದ್ದರಾಮಯ್ಯ ತಮ್ಮ ಪುತ್ರ, ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಜೊತೆಗೆ ತೋಟದ ಮನೆಯಲ್ಲಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ಪ್ರತೀ ದಿನ ಸಾವಿರ ದಾಟುತ್ತಿದೆ. ಇತ್ತೀಚೆಗೆ ನಡೆದ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದ, ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೋವಿಡ್ ಸೋಂಕು ದೃಢವಾಗಿತ್ತು.

Karnataka Opposition Leader Siddaramaiah In Home Quarantine At His Mysuru Residence

ರಾಜ್ಯ ಸರ್ಕಾರದ ಅಯೋಗ್ಯತೆಗೆ ಇದಕ್ಕಿಂತ ಸಾಕ್ಷಿ ಬೇಕೇ? ಸಿದ್ದರಾಮಯ್ಯರಾಜ್ಯ ಸರ್ಕಾರದ ಅಯೋಗ್ಯತೆಗೆ ಇದಕ್ಕಿಂತ ಸಾಕ್ಷಿ ಬೇಕೇ? ಸಿದ್ದರಾಮಯ್ಯ

ಆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ, ಬಹುತೇಕ ರಾಜ್ಯ ಕಾಂಗ್ರೆಸ್ಸಿನ ಪ್ರಮುಖ ನಾಯಕರು ಭಾಗವಹಿಸಿದ್ದರು. ಈ ಹಿನ್ನಲೆಯಲ್ಲಿ, ಡಿಕೆಶಿ ಕೂಡಾ ತಪಾಸಣೆ ನಡೆಸಿಕೊಂಡಿದ್ದರು. "ನನ್ನ ಕ್ಷೇತ್ರ ವರುಣದಲ್ಲೂ ನಾಲ್ಕು ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ಬೆಂಗಳೂರನ್ನು ಕನಿಷ್ಠ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಬೇಕು" ಎಂದು ಡಾ.ಯತೀಂದ್ರ ಹೇಳಿದ್ದಾರೆ.

English summary
Karnataka Opposition Leader Siddaramaiah In Home Quarantine At His Mysuru Residence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X