Get Updates
Get notified of breaking news, exclusive insights, and must-see stories!

BY Vijayendra: ಸಿದ್ಧರಾಮಯ್ಯ ವಿರುದ್ಧ ರಣತಂತ್ರ ರೂಪಿಸಲು ಅಖಾಡಕ್ಕಿಳಿದ ವಿಜಯೇಂದ್ರ

ಸಿದ್ದರಾಮಯ್ಯ ಅವರನ್ನು ತವರು ಕ್ಷೇತ್ರದಲ್ಲಿ ಮಣಿಸಲು ಬಿಜೆಪಿ ಪಣತೊಟ್ಟಂತಿದೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿರುವ ಬಿಜೆಪಿ, ಅವರನ್ನು ಗೆಲ್ಲಿಸಲು ರಣತಂತ್ರ ರೂಪಿಸಲು ಮುಂದಾಗಿದೆ. ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಲು ಬಿವೈ ವಿಜಯೇಂದ್ರ ಸಜ್ಜಾಗಿದ್ದಾರೆ.

ಬಿವೈ ವಿಜಯೇಂದ್ರ ಶುಕ್ರವಾರ ವರುಣಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಕರೆದಿದ್ದು ಚುನಾವಣಾ ಅಖಾಡ ಮತ್ತಷ್ಟು ರಂಗೇರಿದೆ. ಬಿವೈ ವಿಜಯೇಂದ್ರ ಪ್ರವೇಶದೊಂದಿಗೆ ವರುಣಾದಲ್ಲಿ ರಾಜಕೀಯ ಮತ್ತಷ್ಟು ಕುತೂಹಲ ಕೆರಳಿಸಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ರಾಜಕೀಯವಾಗಿ ಹಣಿಯಲು ಬಿಜೆಪಿ ರಣತಂತ್ರ ರೂಪಿಸಲಿದೆ.

Karnataka Poll: BY Vijayendra To Campaign Against Siddaramaiah In Varuna Constituency

ಕರ್ನಾಟರ ಬಿಜೆಪಿಯಲ್ಲಿ ಸಂಘಟನೆಯಲ್ಲಿ ಗಮನ ಸೆಳೆದಿರುವ, ಈಗಾಗಲೇ ಹಲವು ಮಧ್ಯಂತರ ಚುನಾವಣೆ ಸಂದರ್ಭದಲ್ಲಿ ಹಲವು ಕ್ಷೇತ್ರಗಳ ಚುನಾವಣಾ ಜವಾಬ್ದಾರಿ ವಹಿಸಿಕೊಂಡಿದ್ದ ವಿಜಯೇಂದ್ರ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಅವರು ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ ಸಾಧನೆ ಮಾಡಿದ್ದಾರೆ. ಈಗ ವರುಣಾ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದು, ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಮೈಸೂರು, ಚಾಮರಾಜನಾಗರ ಭಾಗದಲ್ಲಿ ಪ್ರಚಾರ

ವರುಣಾದಲ್ಲಿ ಪ್ರಚಾರ ಮಾಡಿದ ನಂತರ ಬಿವೈ ವಿಜಯೇಂದ್ರ ಮೈಸೂರು ಮತ್ತು ಚಾಮರಾಜನಗರದ ಭಾಗದಲ್ಲಿ ಕೂಡ ಪ್ರಚಾರ ಮಾಡುವ ಸಾಧ್ಯತೆ ಇದೆ. ಶುಕ್ರವಾರ ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದು, ಚುನಾವಣಾ ರಣತಂತ್ರದ ಬಗ್ಗೆ ಚರ್ಚೆ ಮಾಡಲಿದ್ದಾರೆ.

ವರುಣಾದಲ್ಲಿ ಸ್ಪರ್ಧಿಸಲು ಬಿಎಸ್‌ವೈ ಅವರ ಶಿಷ್ಯ ಕಾಪು ಸಿದ್ದಲಿಂಗಸ್ವಾಮಿ ತುದಿಗಾಲಲ್ಲಿ ನಿಂತಿದ್ದರು. ಅವರು ಕ್ಷೇತ್ರದಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡುವ ಕೆಲಸ ಮಾಡುತ್ತಾ ಬಂದಿದ್ದಾರೆ. ಚುನಾವಣೆ ಸಮೀಪವಾದಂತೆ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ವರುಣಾದಲ್ಲಿ ಟಿಕೆಟ್ ಸಿಗುತ್ತೆ ಎನ್ನಲಾಗಿತ್ತು, ಆದರೆ ಕೊನೇ ಕ್ಷಣದಲ್ಲಿ ಅವರಿಗೆ ಟಿಕೆಟ್ ಕೈತಪ್ಪಿತ್ತು.

ಆದರೂ, ವಿಜಯೇಂದ್ರ ವರುಣಾದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತಿದ್ದರು. ವಿ ಸೋಮಣ್ಣ ಅವರನ್ನು ಸಿದ್ದರಾಮಯ್ಯ ವಿರುದ್ಧ ನಿಲ್ಲಿಸಿದ್ದರೂ, ಇದು ವಿಜಯೇಂದ್ರ, ಕಾಪು ಸಿದ್ದಲಿಂಗಸ್ವಾಮಿ ಮತ್ತು ಸಿದ್ದರಾಮಯ್ಯ-ಯತೀಂದ್ರ ನಡುವಿನ ಹಣಾಹಣಿ ಎನ್ನಲಾಗಿದೆ. ಸೋಮಣ್ಣ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.

ಲಿಂಗಾಯತ ಪ್ರಾಬಲ್ಯ ಇರುವ ಕ್ಷೇತ್ರ

ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕಡಿಮೆ ಮಾಡಲು ಬಿಜೆಪಿ ಯೋಜನೆ ಮಾಡಿತ್ತು. ವರುಣಾ ಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ, ಅದೇ ಸಮುದಾಯದ ನಾಯಕನನ್ನು ಕಣಕ್ಕಿಳಿಸಲು ಯೋಜನೆ ರೂಪಸಿತ್ತು. ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಒಪ್ಪಿಗೆ ನೀಡಿದ್ದರೂ ಬಿಎಸ್‌ವೈ ವಿರೋಧ ವ್ಯಕ್ತಪಡಿಸಿದ್ದರು. ಈಗ ಮತ್ತೊಬ್ಬ ಲಿಂಗಾಯತ ನಾಯಕ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ. ಸಂಸದ ಪ್ರತಾಪ್ ಸಿಂಹ ಕೂಡ ಸೋಮಣ್ಣ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ಈಗಾಗಲೇ ತಂಡದಲ್ಲಿ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ಗ್ರಾಮಪಂಚಾಯಿತಿ ಕಾಂಗ್ರೆಸ್ ಬೆಂಬಲಿತರ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ಕೊನೆ ಚುನಾವಣೆ ಎಂದು ಹೇಳುವ ಮೂಲಕ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ. ಘಟಾನುಘಟಿಗಳೇ ಸಿದ್ದರಾಮಯ್ಯ ವಿರುದ್ಧ ನಿಂತಿರುವುದರಿಂದ ವರುಣಾ ಕ್ಷೇತ್ರದ ರಾಜಕೀಯ ಮತ್ತಷ್ಟು ರಂಗೇರಿದ್ದು, ಮತದಾರ ಯಾರಿಗೆ ಮಣೆಹಾಕುತ್ತಾನೆ ಎನ್ನುವುದು ಮೇ 13ರಂದು ತಿಳಿಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+