ಸಿಸಿಟಿವಿ ಕಣ್ಗಾವಲ್ಲಿನಲ್ಲಿ SSLC ಪರೀಕ್ಷೆ: ತನ್ವೀರ್ ಸೇಠ್

ಮೈಸೂರು, ಜನವರಿ 8 : ಈ ಬಾರಿ ಮಾರ್ಚ್ 23 ರಿಂದ ಏಪ್ರಿಲ್ 6 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ 788 ಕೇಂದ್ರಗಳಿದ್ದು, ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.

ಮೈಸೂರಿನಲ್ಲಿ ಸೊಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲದಂತೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಜ್ಜಾಗಿದೆ. ಹಲವು ವರ್ಷಗಳಿಂದ ಪರೀಕ್ಷೆಗಳಲ್ಲಿ ಗೊಂದಲವಾಗುತ್ತಿದ್ದು, ಈ ಸಲ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಡ್ಡಾಯವಾಗಿ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು" ಎಂದು ಹೇಳಿದರು.

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಾರ್ಚ್ 1 ರಿಂದ 17ರವರೆಗೂ ಪಿಯುಸಿ ಪರೀಕ್ಷೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯಡಿ ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಲಾಗುವುದು.

Karnataka SSLC Board (Class 10) exams 2018 will be conducted under CCTV says Tanveer Sait

ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ ಕೊನೆಯ ವಾರದಲ್ಲಿ ಮತ್ತು ಪಿಯುಸಿ ಫಲಿತಾಂಶವನ್ನು ಏಪ್ರಿಲ್ ಮೂರನೇ ವಾರದಲ್ಲಿ ನೀಡಲಾಗುವುದು. ಇದಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+