ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 08 : ಕೆ.ಆರ್.ನಗರದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲಾಗುತ್ತದೆ. ಒಂದು ಹಂತದ ಇತ್ಯರ್ಥವಾಗಿ ಕಾರ್ಮಿಕರಿಗೆ 14ಕೋಟಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

 ಶ್ರೀರಾಮ ಸಕ್ಕರೆ ಕಾರ್ಖಾನೆ ಕಾರ್ಯಾರಂಭಕ್ಕಾಗಿ ಸತ್ಯಾಗ್ರಹ ಶ್ರೀರಾಮ ಸಕ್ಕರೆ ಕಾರ್ಖಾನೆ ಕಾರ್ಯಾರಂಭಕ್ಕಾಗಿ ಸತ್ಯಾಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಕ್ಕರೆ ಖಾತೆ ಸಚಿವೆ ಗೀತಾ ಮಹದೇವಪ್ರಸಾದ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಖನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿ ಅವರಿಗೆ ವಹಿಸಲು ತಕ್ಷಣ ಟೆಂಡರ್ ಕರೆಯುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Karnataka to outsource Sri Rama Cooperative Sugar Mill to private players

ಸರಿಯಾಗಿ ವೇತನ ಪಾವತಿಯಾಗದೆ ಸಂಕಷ್ಟದಲ್ಲಿರುವ ಕಾರ್ಖಾನೆಯ 154 ಕಾರ್ಮಿಕರಿಗೆ ರಕ್ಷಣೆ ಒದಗಿಸಲು, ಒಂದು ಹಂತದ ಇತ್ಯರ್ಥವಾಗಿ ವೇತನ ಪಾವತಿ ಮಾಡಲು 14 ಕೋಟಿ ರೂ. ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.

ಐದು ಸಕ್ಕರೆ ಕಾರ್ಖಾನೆಗಳಿಗೆ ಮಂಡ್ಯ ಡಿಸಿ ನೋಟಿಸ್ಐದು ಸಕ್ಕರೆ ಕಾರ್ಖಾನೆಗಳಿಗೆ ಮಂಡ್ಯ ಡಿಸಿ ನೋಟಿಸ್

ಕಳೆದ ಐದು ವರ್ಷಗಳಿಂದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖನೆ ಮುಚ್ಚಿದ್ದು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಮಿಕರಿಗೆ ಬಾಕಿ ಇರುವ ವೇತನ ಪಾವತಿ ಮಾಡಲು 14 ಕೋಟಿ ಅಗತ್ಯವಿತ್ತು. ಈಗ ಕಾರ್ಖನೆಯನ್ನು ಖಾಸಗಿ ಅವರಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ.

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖನೆ ಮುಚ್ಚಿರುವುದರಿಂದ ರೈತರು ಮತ್ತು ಕಾರ್ಖನೆಯನ್ನು ನಂಬಿರುವ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತ ಸಂಘಟನೆಗಳು ಕಾರ್ಖನೆಯನ್ನು ಪುನಃ ಆರಂಭಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

English summary
Karnataka government decided to outsource Sri Rama Cooperative Sugar Mill in K.R. Nagar, Mysuru to private players.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X