ಕತುವಾ ಪ್ರತಿಭಟನೆ: ಹೊತ್ತಿ ಉರಿಯುತ್ತಿದೆ ಮೈಸೂರಿನ ಕ್ಯಾತಮಾರನಹಳ್ಳಿ

ಮೈಸೂರು, ಏಪ್ರಿಲ್ 20 : ಕತುವಾ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಿನ್ನೆ(ಏಪ್ರಿಲ್ 21) ಮಧ್ಯಾಹ್ನದಿಂದ ಆರಂಭವಾಗಿರುವ ಘರ್ಷಣೆ ಇಂದು ಸಹ ಮುಂದುವರಿದಿದೆ.

ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಉಂಟಾಗಿರುವ ಗಲಭೆಗೆ ಸಂಬಂಧಿಸಿದಂದೆ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ. ನರಸಿಂಹ ರಾಜ ಕ್ಷೇತ್ರದಲ್ಲಿ ಜಿಹಾದಿಗಳು ಏನು ಮಾಡುತ್ತಿದ್ದಾರೆ ಎಂಬುದನ್ನು ಹೇಳಬೇಕಿಲ್ಲ. ಈ ವಿಡಿಯೋ ನೋಡಿ ಗೊತ್ತಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಘಟನೆ ಕಾಶ್ಮೀರದಲ್ಲಿ ನಡೆದಿಲ್ಲ, ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಂದು ಗಲಭೆಯಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರ ರಕ್ತಸಿಕ್ತ ಚಿತ್ರವನ್ನು ಸಿಂಹ ಪೋಸ್ಟ್ ಮಾಡಿದ್ದಾರೆ.

ಜನವರಿ ತಿಂಗಳಿನಲ್ಲಿ ಜಮ್ಮು ಕಾಶ್ಮೀರದ ಕತುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದಲ್ಲೂ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿದೆ. ಅದರದೇ ಭಾಗವೆಂಬಂತೆ ಮೈಸೂರಿನಲ್ಲಿ ಕ್ಯಾತಮಾರನಹಳ್ಳಿಯ ಬಳಿ ಕತುವಾ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯೇನೋ ಶಾಂತವಾಗಿ ಸಾಗಿತ್ತು. ಆದರೆ ಪ್ರತಿಭಟನಕಾರರು ಮನೆಗೆ ಹಿಂದಿರುಗುತ್ತಿದ್ದ ಅಂಗಡಿಯೊಂದರ ಮೇಲೆ ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದರು.

Kathua Protest in Mysuru becomes violence

ಅಂಗಡಿಯಲ್ಲಿದ್ದ ವ್ಯಕ್ತಿಯ ಮೇಲೂ ಹಲ್ಲೆ ನಡೆಸಿದ ಪರಿಣಾಮ ಆತ ಗಾಯಗೊಂಡಿದ್ದರು. ಇದಿರಂದ ಕ್ಯಾತಮಾರನಹಳ್ಳಿ ಬಳಿ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಸ್ಥಳಕ್ಕೆ ಉದಯಗಿರಿ ಪೊಲೀಸರು ಆಗಮಿಸಿದ್ದರು.

Kathua Protest in Mysuru becomes violence

ಗಲಾಟೆ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿತ್ತು. ಘಟನೆಯಲ್ಲಿ 8 ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಉದಯಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+