ನೀಲಂಬೂರು-ನಂಜನಗೂಡು ರೈಲ್ವೆ ಯೋಜನೆಗೆ ಕೇರಳದ ಒಪ್ಪಿಗೆ
ಮೈಸೂರು, ಅ.18 : ನೀಲಂಬೂರು-ನಂಜನಗೂಡು ರೈಲು ಮಾರ್ಗ ಯೋಜನೆ ಜಾರಿಗೊಳಿಸಲು ಕೇರಳ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಈ ರೈಲು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.
ಕೇರಳ ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. 'ಬಂಡೀಪುರ ಕಾಡಿನ ಮೂಲಕ ಮಾರ್ಗ ಹಾದು ಹೋಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸುತ್ತಿದೆ. ಎರಡೂ ರಾಜ್ಯಗಳನ್ನು ಸಂಪರ್ಕಿಸುವ ಯೋಜನೆಗೆ ನಮ್ಮ ಒಪ್ಪಿಗೆ ಇದೆ' ಎಂದು ಹೇಳಿದ್ದಾರೆ.

ನೀಲಂಬೂರು-ನಂಜನಗೂಡು ರೈಲು ಮಾರ್ಗ ಕೇರಳ ಭಾಗದ ಜನರ ಬಹುದಿನದ ಬೇಡಿಕೆ. ಕರ್ನಾಟಕ ಸರ್ಕಾರ ಒಪ್ಪಿದರೆ ಪರ್ಯಾಯ ಮಾರ್ಗದಲ್ಲಿ ರೈಲ್ವೆ ಹಳಿ ಹಾಕಿ ಯೋಜನೆಯನ್ನು ಜಾರಿಗೊಳಿಸಲು ಕೇರಳ ಸಿದ್ಧವಿದೆ. ಯೋಜನೆ ಜಾರಿಯಾದರೆ ಮೈಸೂರು ಮತ್ತು ಮಲ್ಲಪ್ಪುರಂ ನಡುವೆ ಸಂಪರ್ಕ ಸಾಧ್ಯವಾಗಲಿದೆ.
ಈಗಾಗಲೇ ಕೇರಳ ಸರ್ಕಾರ ಯೋಜನೆಯ ಸಮೀಕ್ಷೆಗಾಗಿ 8 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಎರಡು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಸಮೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಇನ್ನೂ ಒಪ್ಪಿಗೆ ನೀಡಿಲ್ಲ.












Click it and Unblock the Notifications