• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ಕೇರಳ ಶಾಲಾ ಮಕ್ಕಳು

|

ಮೈಸೂರು, ನವೆಂಬರ್. 13: ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿಗಳು ನಗರದ ಖಾಸಗಿ ಹೋಟೆಲ್ ನಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಗದಗ: ಒಂದೇ ಊರಿನ 50 ಮಂದಿ ವಾಂತಿ, ಬೇಧಿಯಿಂದ ಅಸ್ವಸ್ಥ

ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಈ ನಡುವೆ ಸೋಮವಾರ (ನವೆಂಬರ್.12) ಮಧ್ಯಾಹ್ನ ಒಂಟಿಕೊಪ್ಪಲಿನ ಎಂಪೈರ್ ಹೋಟೆಲ್ ನಲ್ಲಿ ವಿದ್ಯಾರ್ಥಿಗಳು ಊಟ ಮಾಡಿದರು.

ಮೈಸೂರಿನಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಹಾರ ಸೇವಿಸಿದ ತಕ್ಷಣ 20 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅಸ್ವಸ್ಥಗೊಂಡ ವಿಧ್ಯಾರ್ಥಿಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌

ಇವರು ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವುದು ತಿಳಿದು ಬಂದಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೆ.ಆರ್.ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ರಾಜೇಶ್‌ ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ವಿ.ವಿ.ಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

English summary
Kerala government school childrens are suffering from sick due to ate poisoning food in mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X