ಕೊಲ್ಕತ್ತಾ ಚಲನಚಿತ್ರೋತ್ಸವಕ್ಕೆ ‘ಕೊಡಗ್ ರ ಸಿಪಾಯಿ’ ಕೊಡವ ಚಿತ್ರ
ಮೈಸೂರು, ಅಕ್ಟೋಬರ್ 28: ಇತ್ತೀಚಿಗೆ ಬಿಡುಗಡೆಯಾದ 'ಕೊಡಗ್ ರ ಸಿಪಾಯಿ' ಕೊಡವ ಚಲನಚಿತ್ರ ಕೊಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ.
ಮೈಸೂರು ಕೊಡವ ಸಮಾಜದಲ್ಲಿ "ಕೊಡಗ್ ರ ಸಿಪಾಯಿ" ಚಲನಚಿತ್ರದ 51ನೇ ಪ್ರದರ್ಶನದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಈ ಬಗ್ಗೆ ಮಾಹಿತಿ ನೀಡಿದರು. ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವಾಗಲೇ ಕೊಡವ ಚಲನಚಿತ್ರವೊಂದು ಪ್ರದರ್ಶನಕ್ಕೆ ಅವಕಾಶ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.
"ನ.8 ರಿಂದ 15ರ ವರೆಗೆ ಕೊಲ್ಕತ್ತಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, "ಕೊಡಗ್ ರ ಸಿಪಾಯಿ" ಪ್ರದರ್ಶನಗೊಳ್ಳಲಿದೆ. ತಾವು ನಿರ್ಮಿಸಿದ "ಬಾಕೆಮನೆ" ಕೊಡವ ಚಲನ ಚಿತ್ರ ಕೂಡ ಈ ಹಿಂದೆ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿತ್ತು. ಇದೀಗ ಅಪರೂಪದ ಉಪ ಭಾಷೆಗಳ ವಿಭಾಗದ ಚಲನಚಿತ್ರಗಳಲ್ಲಿ "ಕೊಡಗ್ ರ ಸಿಪಾಯಿ" ಅವಕಾಶ ಪಡೆದಿರುವುದು ಅತ್ಯಂತ ಹರ್ಷದಾಯಕ" ಎಂದರು.

ಮೈಸೂರು ಕೊಡವ ಸಮಾಜದ ಅಧ್ಯಕ್ಷ ಕೇಕಡ ಬೆಳ್ಯಪ್ಪ, ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕ ಕಲ್ಯಾಟಂಡ ಬಿ. ಗಣಪತಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗ್ ರ ಸಿಪಾಯಿ ಚಿತ್ರದ ನಾಯಕ ನಟ ಅಥ್ಲಿಟ್ ಅರ್ಜುನ್ ದೇವಯ್ಯ ಉಪಸ್ಥಿತರಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications