ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾತ್ರಿ ಕರ್ಫ್ಯೂ ವಾಪಸ್ ಪಡೆಯಲು ಕಾಂಗ್ರೆಸ್‌ ಒತ್ತಾಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 24: ರಾಜ್ಯ ಸರ್ಕಾರ ರಾತ್ರಿ ಮಾತ್ರ ಕರ್ಫ್ಯೂ ಜಾರಿ ಮಾಡಿರುವುದಕ್ಕೆ ವೈಜ್ಞಾನಿಕ ಕಾರಣ ಇದ್ದರೆ ಕೊಡಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಚಾರ ಪ್ರಿಯ ಸಚಿವ ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ದಾರಿ ತಪ್ಪಿಸಿ ಕರ್ಫ್ಯೂ ಜಾರಿ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀನಿವಾಸ್‌ ಪ್ರಸಾದ್‌ ಮತ್ತೆ ವಾಗ್ದಾಳಿಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀನಿವಾಸ್‌ ಪ್ರಸಾದ್‌ ಮತ್ತೆ ವಾಗ್ದಾಳಿ

ಸಿಎಂ ಅವರು ಯಾರೋ ಬರೆದು ಕೊಟ್ಟಿದ್ದನ್ನು ಓದಿ ಹೋಗುತ್ತಿದ್ದಾರೆ ಅಷ್ಟೆ. ಕರ್ಫ್ಯೂ ನಿಂದ ಏನೂ ಪ್ರಯೋಜನವಿಲ್ಲ. ತಕ್ಷಣ ಕರ್ಫ್ಯೂ ವಾಪಸ್ ಪಡೆಯಿರಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.

Mysuru: KPCC Spokesperson M Laxman Urges Karnataka Govt To Withdrawn Night Curfew

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿತ್ತು. ಮೂರು ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು ಸತ್ಯ. ಚಾಮುಂಡೇಶ್ವರಿ, ವರುಣಾ, ಬಾದಾಮಿಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಆಗಿದೆ. ಇದು ನೂರಕ್ಕೆ ನೂರು ಸತ್ಯ. ಸಿದ್ದರಾಮಯ್ಯ ಹಾಗೂ ಅವರ ಪುತ್ರನನ್ನು ಸೋಲಿಸುವುದಕ್ಕೆ ಒಳ ಒಪ್ಪಂದ ಆಗಿತ್ತು. ಇದರಲ್ಲಿ ಚಾಮುಂಡೇಶ್ವರಿಯಲ್ಲಿ ಅವರು ಯಶಸ್ವಿಯಾದರು. ಉಳಿದ ಎರಡು ಕಡೆ ಅದು ವರ್ಕ್ ಆಗಿಲ್ಲ ಎಂದು ಕಿಡಿಕಾರಿದರು.

ಇಷ್ಟೇ ಯಾಕೆ ಮಲ್ಲೇಶ್ವರಂನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬಿ.ಫಾರಂ ಕೊಡುತ್ತಿರುವವರು ಅಶ್ವಥ್ ನಾರಾಯಣ. ಮೂರು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗಬೇಕೆಂದು ಅಶ್ವಥ್ ನಾರಾಯಣ ನಿರ್ಧಾರ ಮಾಡ್ತಿದ್ದಾರೆ. ಇದನ್ನು ಒಳ ಒಪ್ಪಂದ ಎನ್ನದೆ ಇನ್ನೆನಂತಾರೆ ಕುಮಾರಸ್ವಾಮಿಯವರೇ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಹಾಕಿದರು.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಬೆನಗಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ರದ್ಧತಿಗೆ ಕೋರ್ಟ್ ಒಪ್ಪಿಲ್ಲ. ಈಗ ಕೇಸ್ ವಿಚಾರಣೆ ಆರಂಭವಾಗುತ್ತಿದೆ. ನೀವು ಸಿಎಂ ಸ್ಥಾನದಲ್ಲಿದ್ದರೆ ನಿಷ್ಪಕ್ಷಪಾತ ವಿಚಾರಣೆ ಹೇಗೆ ಸಾಧ್ಯ? ಹೀಗಾಗಿ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲವೇ ಸುಪ್ರೀಂ ಕೋರ್ಟ್ ಮೂಲಕ ವಿಚಾರಣೆ ತಡೆ ತಂದುಕೊಳ್ಳಿ. ಈ ಬಗ್ಗೆ ಬಿ.ಎಲ್ ಸಂತೋಷ್, ಪ್ರತಾಪ್ ಸಿಂಹ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

English summary
Give if there is a scientific reason why the state government has only issued a curfew at night, KPCC spokesperson M Laxman said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X