ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕೆ.ಎಸ್ ಭಗವಾನ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 9: ಪ್ರತಿ ಬಾರಿ ಬಿಜೆಪಿ ನಾಯಕರು, ಬಿಜೆಪಿ ಸಿದ್ಧಾಂತಗಳ ವಿರುದ್ಧ ವಾಗ್ದಾಳಿ ನಡೆಸುವ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರು ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವಂತೆ ಆಗ್ರಹಿಸುವ ಸಲುವಾಗಿ ಸಚಿವ ಸೋಮಶೇಖರ್ ಅವರನ್ನು ಭೇಟಿ ಮಾಡಲು ನೇರವಾಗಿ ಮೈಸೂರಿನ ಬಿಜೆಪಿ ಕಚೇರಿಗೆ ತೆರಳಿದ ಪ್ರೊ.ಭಗವಾನ್, ಸಚಿವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು.

ಮೈಸೂರು ಹೈಕಮಾಂಡ್; ಜಿಟಿಡಿಗೆ ಸಾ. ರಾ. ಮಹೇಶ್ ಪ್ರತಿಕ್ರಿಯೆ!ಮೈಸೂರು ಹೈಕಮಾಂಡ್; ಜಿಟಿಡಿಗೆ ಸಾ. ರಾ. ಮಹೇಶ್ ಪ್ರತಿಕ್ರಿಯೆ!

ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿ ಸದಸ್ಯರೊಂದಿಗೆ ಕಳೆದ ರಾತ್ರಿ ಬಿಜೆಪಿ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಭಗವಾನಗ ಹಾಗೂ ಇತರರು ಭೇಟಿ ಮಾಡಿದರು. ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿಯು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವಂತೆ ಹೋರಾಟ ನಡೆಸುತ್ತಿದಾರೆ.

Mysuru: KS Bhagwan Who Visited BJP Office In Mysuru

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಹೊಸ ಶೈಕ್ಷಣಿಕ ನೀತಿಗಳು ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೆಲವು ನೀತಿಗಳು ಈ ಅಧ್ಯಯನ ಕೇಂದ್ರಕ್ಕೆ ಸಂಚು ತರುತ್ತಿವೆ. ಈ ಕೇಂದ್ರವನ್ನು ಶಾಶ್ವತವಾಗಿ ಮುಚ್ಚುವ ಪ್ರಕ್ರಿಯೆಗಳು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿರುವುದು ತಿಳಿದು ಬಂದಿದೆ. ಆದ್ದರಿಂದ ಕೂಡಲೇ ಈ ಅಧ್ಯಯನ ಕೇಂದ್ರವನ್ನು ಸ್ವಾಯತ್ತತೆ ನೀಡುವಂತೆ ಆಗ್ರಹಿಸಿದರು.

Mysuru: KS Bhagwan Who Visited BJP Office In Mysuru

ಸಚಿವ ಎಸ್.ಟಿ ಸೋಮಶೇರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸ್ತ್ರೀಯ ಕನ್ನಡ ಸ್ವಾಯತ್ತ ಕ್ರಿಯಾ ಸಮಿತಿ ಸದಸ್ಯರು, ಈ ಭೇಟಿ ವೇಳೆಯಲ್ಲಿ ಹಿರಿಯ ಹೋರಾಟಗರ ಪ.ಮಲ್ಲೇಶ್, ನಾ. ದಿವಾಕರ್, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು, ಮೂಗೂರು ನಂಜುಂಡಸ್ವಾಮಿ ಸೇರಿದಂತೆ ಇನ್ನಿತರ ಸಮಿತಿ ಸದಸ್ಯರ ಇದ್ದರು.

English summary
Prof.K.S. Bhagwan had visited the Mysuru BJP office in an astonishing development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X