ಕೆಎಸ್ ‌ಒಯು ಅಕಾಡೆಮಿಕ್ ಭವನ ಈಗ ಕೋವಿಡ್ ಸೆಂಟರ್‌

ಮೈಸೂರು, ಜುಲೈ 27: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ಸುಸಜ್ಜಿತ ರೀತಿಯಲ್ಲಿ ಎದುರಿಸಲು ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್‌ ಗಳನ್ನು ಸ್ಥಾಪಿಸಲಾಗಿದೆ.

Recommended Video

      India - Bangladesh ಸಂಬಂಧಕ್ಕೆ ಹುಳಿ ಹಿಂಡಿದ China | Oneindia Kannada

      ಮೈಸೂರಿನ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕಾಡೆಮಿಕ್ ಭವನದಲ್ಲೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಇಲ್ಲಿ 600 ಬೆಡ್‌ ಗಳ ಸೌಕರ್ಯ ಕಲ್ಪಿಸಲಾಗಿದೆ. ಗುಣಲಕ್ಷಣವಿಲ್ಲದ ಕೊರೊನಾ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ಊಟೋಪಚಾರದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

       ಮನರಂಜನಾ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತ

      ಮನರಂಜನಾ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತ

      ಅಕಾಡೆಮಿಕ್ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಅಲ್ಲೇ ಇರಬೇಕಾಗುವುದರಿಂದ ಅವರಿಗೆ ಯಾವುದೇ ರೀತಿಯಲ್ಲಿ ಬೇಸರ ಉಂಟಾಗಬಾರದು ಎಂಬ ಉದ್ದೇಶದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣವನ್ನು ಮೈಸೂರು ಜಿಲ್ಲಾಡಳಿತ ಕಲ್ಪಿಸಿದೆ.

       ಒಳಾಂಗಣ ಕ್ರೀಡಾಪರಿಕರ

      ಒಳಾಂಗಣ ಕ್ರೀಡಾಪರಿಕರ

      ಸಭಾಂಗಣದಲ್ಲಿ ಒಳಾಂಗಣ ಕ್ರೀಡಾಪರಿಕರಗಳಾದ ಕೇರಂ ಬೋರ್ಡ್, ಚೆಸ್ ಹಾಗೂ ಬ್ಯಾಡ್ಮಿಂಟನ್ ಪರಿಕರಗಳನ್ನು ನೀಡಲಾಗಿದೆ. ಪ್ರತಿಯೊಂದು ಕೊಠಡಿಯಲ್ಲೂ ಕೇಬಲ್ ಸಂಪರ್ಕವಿರುವ ಟಿ.ವಿ, ವೈಫೈ ವ್ಯವಸ್ಥೆ ಇದೆ.

       ವೈದ್ಯಕೀಯ ಸಿಬ್ಬಂದಿಗೆ

      ವೈದ್ಯಕೀಯ ಸಿಬ್ಬಂದಿಗೆ "ಗ್ರೀನ್ ಝೋನ್"

      ರೋಗಿಗಳು ಸುರಕ್ಷತೆಯಷ್ಟೇ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗೂ ಪ್ರಾಧಾನ್ಯ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆಂದೇ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್ ಜೋನ್ ಎಂದು ಹೆಸರಿಡಲಾಗಿದೆ. ಇಲ್ಲಿ ವೈದ್ಯರು, ಸ್ಟಾಫ್ ನರ್ಸ್ ಹಾಗೂ ಆಡಳಿತ ಸಿಬ್ಬಂದಿ ಇರುತ್ತಾರೆ. ಶುಚಿತ್ವದ ಕೊರತೆ ನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಶೌಚಾಲಯ ನಿರ್ವಹಣೆ ಸೇರಿದಂತೆ ಕೋವಿಡ್ ಔಷಧೀಯ ತ್ಯಾಜ್ಯವನ್ನು ಅತ್ಯಂತ ಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

       ಜಿಲ್ಲಾಧಿಕಾರಿಯಿಂದ ಶ್ಲಾಘನೆ

      ಜಿಲ್ಲಾಧಿಕಾರಿಯಿಂದ ಶ್ಲಾಘನೆ

      "ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಅತ್ಯುತ್ತಮ ವ್ಯವಸ್ಥೆ ಇದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ ಶ್ರೇಯಸ್ಸು ಇಲ್ಲಿನ ನೋಡಲ್ ಅಧಿಕಾರಿ ಡಾ.ಅಶೋಕ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಂ.ಟಿ.ಮಂಜುನಾಥ್ ಹಾಗೂ ಈ ಕೇಂದ್ರದಲ್ಲಿ ಕೆಲಸ ನಿರ್ವಹಿಸುವ ಎಲ್ಲರಿಗೂ ಸಲ್ಲಬೇಕು" ಎಂದು ಶ್ಲಾಘಿಸಿದ್ದಾರೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+