ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮುಕ್ತ ವಿವಿಗೆ ಮರುಜೀವ: ಹೊಸ ಕೋರ್ಸ್ ಗೆ ಅರ್ಜಿ ಆಹ್ವಾನ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 14: ಹಲವು ವಿವಾದಗಳಿಂದ ಮಾನ್ಯತೆ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಯುಜಿಸಿ ಮಾನ್ಯತೆ ನೀಡಿದ ಬೆನ್ನಲ್ಲೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ.

ಯುಜಿಸಿ ಮಾನ್ಯತೆ ಇರುವ ಸ್ನಾತಕೋತ್ತರ ಕೋರ್ಸ್ ಗಳಾದ ಬಿಎ, ಬಿ.ಕಾಂ, ಎಂ.ಎ, ಎಂ.ಕಾಂ, ಎಂ.ಜಿ.ಸಿ, ಬಿಎಲ್ಐ ಎಸ್‌ಸಿ, ಎಂಎಲ್ಐಎಸ್ ಸಿ, ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ.

ಯುಜಿಸಿ ಮಾನ್ಯತೆ ಪಡೆದ ಕೆಎಸ್‌ಒಯುನ 17 ಕೋರ್ಸ್‌ಗಳು ಯಾವುವು? ಯುಜಿಸಿ ಮಾನ್ಯತೆ ಪಡೆದ ಕೆಎಸ್‌ಒಯುನ 17 ಕೋರ್ಸ್‌ಗಳು ಯಾವುವು?

ದಂಡಶುಲ್ಕವಿಲ್ಲದೆ ಅರ್ಜಿಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನಾಂಕವಾಗಿರುತ್ತದೆ. 200ರೂ ದಂಡದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 1ರಂದು ಕೊನೆಯ ದಿನಾಂಕವಾಗಿರುತ್ತದೆ. ಬಿ.ಎ, ಬಿ.ಕಾಂ, ಪದವಿಗೆ ಪ್ರವೇಶಾತಿ ಶುಲ್ಕ 4600, ಎಂ.ಎಂ, ಎಂ.ಕಾಂ ಪದವಿಗೆ 6100 ಶುಲ್ಕವಿದೆ.

KSOU invites administration for degree and master degree courses

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆ ಒದಗಿಸಿದರೆ ಪ್ರವೇಶ ಶುಲ್ಕದಲ್ಲಿ ವಿನಾಯಿತಿ ದೊರೆಯುತ್ತದೆ. ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.25ರಷ್ಟು ರಿಯಾಯಿತಿ ದೊರೆಯಲಿದೆ.

ಕರ್ನಾಟಕ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕಿದ ಸಿಹಿ ಸುದ್ದಿ ಕರ್ನಾಟಕ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕಿದ ಸಿಹಿ ಸುದ್ದಿ

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು, ನಾಲ್ಕನೇ ಮುಖ್ಯರಸ್ತೆ, ಹದಿಮೂರನೇ ಅಡ್ಡರಸ್ತೆ, ಮಲ್ಲೇಶ್ವರ ಸಂಪರ್ಕಿಸಬಹುದು. ಮೊ.9844506629, ದೂ.080-23448811ಸಂಪರ್ಕಿಸಬಹುದಾಗಿದೆ.

English summary
Karnataka State Open University has invited applications for various degree and master degree courses as UGC approved for the year from 2018 to 2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X