ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಿಂದ ಈ ಜಿಲ್ಲೆಗಳಿಗೆ KSRTC ಬಸ್ ಸಂಚಾರ ರದ್ದು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 15: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಾಗಿರುವ ಪರಿಣಾಮ ಮೈಸೂರಿನಿಂದ ಸಂಚರಿಸುವ ಕೆಲವು ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ.

Recommended Video

IPL 2020 moving to Dubai | Oneindia Kannada

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಲಾಕ್ ಡೌನ್ ಜಾರಿಯಲ್ಲಿರುವ ಬೆಂಗಳೂರು, ರಾಯಚೂರು, ಹುಬ್ಬಳ್ಳಿ, ವಿಜಯಪುರ, ಉಡುಪಿ, ಮಂಗಳೂರು ನಡುವಿನ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಇತರೆ ಜಿಲ್ಲೆಗಳ ನಡುವೆ ಬಸ್‍ ಸಂಚಾರ ನಡೆಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಬೆಂಗಳೂರು ಲಾಕ್ ಡೌನ್; ಕೆಎಸ್ಆರ್‌ಟಿಸಿ ಬಸ್‌ಗಳಿಲ್ಲಬೆಂಗಳೂರು ಲಾಕ್ ಡೌನ್; ಕೆಎಸ್ಆರ್‌ಟಿಸಿ ಬಸ್‌ಗಳಿಲ್ಲ

KSRTC Buses Stopped To Lock down Districts From Mysuru

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಪರಿಣಾಮ ಮೈಸೂರಿನ ಗ್ರಾಮಾಂತರ ಬಸ್‍ ನಿಲ್ದಾಣ ಪ್ರಯಾಣಿಕರಿಲ್ಲದೆ ಬಣಗುಡುತ್ತಿದೆ. ಸಾಮಾನ್ಯ ದಿನಗಳಲ್ಲಿ ಮೈಸೂರಿನಿಂದ ಬೇರೆ ಬೇರೆ ಜಿಲ್ಲೆಗಳ ನಡುವೆ 220 ರಿಂದ 230 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಲಾಕ್ ಡೌನ್ ನಿಂದಾಗಿ ಸದ್ಯ 100-120 ಬಸ್ ಗಳ ಓಡಾಟವಿದ್ದು, ಇತರ ಜಿಲ್ಲೆಗಳಿಗೆ ಅಗತ್ಯ ಪ್ರಯಾಣಿಕರು ಬಂದರೆ ಬಸ್ ಗಳ ಸಂಚಾರ ನಡೆಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ದಶರಥ್ ತಿಳಿಸಿದ್ದಾರೆ.

English summary
Ksrtc buses has been cancelled from mysuru to the districts which lockdown due to coronavirus,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X