KSRTC Electric Bus: ರಸ್ತೆಗಿಳಿಯಲಿವೆ 350 ಎಲೆಕ್ಟ್ರಿಕ್, 20 ಅತ್ಯಾಧುನಿಕ ವೋಲ್ವೊ ಬಸ್
ಮೈಸೂರು, ಜನವರಿ, 23: ಡೀಸೆಲ್ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಪರಿಸರ ಸ್ನೇಹಿ 350 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರವೇ ರಸ್ತೆಗೆ ಇಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದ್ದಾರೆ.
ಮೈಸೂರು ನಗರದ ಬನ್ನಿಮಂಟಪದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 20 ಅಂಬಾರಿ ಉತ್ಸವ್ ಎಸಿ ವೋಲ್ವೊ, 350 ಎಲೆಕ್ಟ್ರಿಕ್ ವಾಹನ, 40 ನಾನ್ ಎಸಿ ಸ್ಲೀಪರ್ (222ವೀಲ್ ಬೇಸ್), 13.5 ಮೀಟರ್ ಉದ್ದದ ನಾಲ್ಕು ಎಸಿ ಸ್ಲೀಪರ್, 13.4 ಮೀಟರ್ ಉದ್ದದ 4 ನಾನ್ ಎಸಿ ಸ್ಲೀಪರ್, 50 ಸಿಟಿ ವೆಹಿಕಲ್ (ಡಲ್ಪ್), 550 ಕರ್ನಾಟಕ ಸಾರಿಗೆ ವಾಹನಗಳನ್ನು ಖರೀದಿಸಲಾಗುತ್ತದೆ. ಈಗಾಗಲೆ ಎಲೆಕ್ಟ್ರಿಕ್ ಬಸ್‌ಗಳನ್ನು ಚೀನಾ ಮೂಲದ ಕಂಪನಿಯಿಂದ ಖರೀದಿಸಲಾಗುತ್ತಿದೆ. ಕೊರೊನಾ ಕಾರಣಕ್ಕಾಗಿ ತಯಾರಿಕೆ ವಿಳಂಬವಾಗಿದೆ. ಫೆಬ್ರವರಿ 15ರೊಳಗೆ 50 ಬಸ್‌ಗಳ ಸೇವೆ ಆರಂಭವಾಗಲಿದೆ ಎಂದು ತಿಳಿಸಿದರು.
ಮೈಸೂರು ಭಾಗಕ್ಕೆ ಹೆಚ್ಚು ವಾಹನ ನೀಡಲು ತೀರ್ಮಾನ
350 ಎಲೆಕ್ಟ್ರಿಕ್ ವಾಹನಗಳಲ್ಲಿ ಮೈಸೂರು ಭಾಗಕ್ಕೆ ಹೆಚ್ಚು ವಾಹನ ನೀಡಲು ತೀರ್ಮಾನಿಸಲಾಗಿದೆ. ಅದರಲ್ಲಿಯೂ ಮೊದಲ ಹಂತದಲ್ಲಿ ಮೈಸೂರು-ಬೆಂಗಳೂರು, ಬೆಂಗಳೂರು-ಮಡಿಕೇರಿ, ಬೆಂಗಳೂರು-ವಿರಾಜಪೇಟೆ, ಬೆಂಗಳೂರು-ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು-ಶಿವಮೊಗ್ಗ ವಲಯಗಳಲ್ಲಿ ಬಳಸಲಾಗುವುದು ಎಂದರು.

ಕೋವಿಡ್ ಸೇರಿದಂತೆ ನಾನಾ ಕಾರಣದಿಂದ ನಿಗಮವು ನಾಲ್ಕು ವರ್ಷದಿಂದ ಹೊಸ ಬಸ್ ಖರೀದಿಸಲು ಸಾಧ್ಯವಾಗಿಲ್ಲ. ಅಲ್ಲದೆ ರಾಜ್ಯದಲ್ಲಿ 9 ಲಕ್ಷ ಕಿಲೋ ಮೀಟರ್ ಸಂಚರಿಸಿರುವ 3000 ಬಸ್‌ಗಳನ್ನು ಗುಜರಿಗೆ ಹಾಕಲಾಗಿದೆ. ಇದರಿಂದ ರಾಜ್ಯದಲ್ಲಿ ಬಸ್‌ಗಳ ಕೊರತೆ ಉಂಟಾಗುತ್ತದೆ. ಇದನ್ನು ತಪ್ಪಿಸಲು ಈ ಸಾಲಿನಲ್ಲಿ ಒಂದು ಸಾವಿರ ಬಸ್‌ಗಳನ್ನು ನಾನಾ ಹಂತಗಳಲ್ಲಿ ಖರೀದಿಸಲಾಗುತ್ತಿದೆ ಎಂದರು.

ವಿಲೀನದಿಂದ ತಗ್ಗಿದ ವೆಚ್ಚ
ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗವನ್ನು ವಿಲೀನಗೊಳಿಸಿದ್ದರಿಂದ ಆಗುತ್ತಿದ್ದ ವೆಚ್ಚದ ಪ್ರಮಾಣ ಕಡಿಮೆಯಾಗಿದೆ. ಮೈಸೂರು ವಿಭಾಗದಲ್ಲಿ 2020-21ರಲ್ಲಿ 161 ಕೋಟಿ ರೂಪಾಯಿ, 2021-22ರಲ್ಲಿ 156 ಕೋಟಿ ರೂಪಾಯಿ ವೆಚ್ಚವಾಗುತ್ತಿತ್ತು. ವಿಲೀನಗೊಳಿಸಿದ ಬಳಿಕ 2022-23ರ ಅವಧಿಯಲ್ಲಿ 101 ಕೋಟಿ ರೂಪಾಯಿ ವೆಚ್ಚವಾಗಿದೆ. ಮೈಸೂರು ವಿಭಾಗದಲ್ಲಿ 1072 ವಾಹನಗಳು ಕಾರ್ಯಾಚರಣೆ ಮಾಡುತ್ತಿದ್ದು, ಪ್ರತಿದಿನ 7,854 ಮಾರ್ಗಗಳಲ್ಲಿ ಸೇವೆ ನೀಡಲಾಗುತ್ತಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪ್ರತಿದಿನ ಸರಾಸರಿ 1.21 ಕೋಟಿ ರೂಪಾಯಿ ಸಾರಿಗೆ ಆದಾಯ ಗಳಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications