KSRTC: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ

ಜಗತ್ತು ವೇಗವಾಗಿ ಬದಲಾಗುತ್ತಿದೆ, ಎಲ್ಲೆಡೆ ಹೊಸ ತಂತ್ರಜ್ಞಾನ ಮಾನವನ ಕೆಲಸವನ್ನು ಕಡಿಮೆ ಮಾಡುತ್ತಿದೆ. ಡಿಜಿಟಲ್ ಪೇಮೆಂಟ್‌ ಜಾರಿಗೆ ಬಂದು ಹಲವು ವರ್ಷಗಳೇ ಕಳೆದರು, ಅದ್ಯಾಕೋ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿರಲಿಲ್ಲ, ಆದರೆ ಈಗ ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ಮೂಲಕ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದೆ.

ಜನ ಟಿಕೆಟ್‌ಗೆ ಕ್ಯೂ ನಿಲ್ಲಬಾರದು, ಚಿಲ್ಲರೆ ಸಮಸ್ಯೆ ಉಂಟಾಗಬಾರದು ಎನ್ನುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿ ಮಾಡಲಾಗಿದ್ದು, ಪ್ರಯಾಣಿಕರು ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಂತರ ಮೈಸೂರು ನಗರವು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮೈಸೂರು ನಗರದಲ್ಲಿರುವ 514 ಮಾರ್ಗಗಳಲ್ಲಿ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದೆ. ಹೀಗಾಗಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

ksrtc implements digital payment system qr code mysuru

ಹೊಸ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ವ್ಯವಸ್ಥೆ ಕಾರ್ಯ ನಿರ್ವಹಣೆ ಬಗ್ಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗಳಿಗೆ ವಾರದ ಹಿಂದೆಯೇ ತರಬೇತಿ ನೀಡಲಾಗಿದೆ. ಎಲ್ಲರೂ ಅದನ್ನು ಬಳಕೆ ಮಾಡಲು ಆರಂಭಿಸಿದ್ದಾರೆ. ಭಾನುವಾರ ಎಲ್ಲಾ ಬಸ್‌ಗಳಲ್ಲಿಯೂ ಡೈನಾಮಿಕ್ ಕ್ಯೂಆರ್ ಕೋಡ್ ಮೂಲಕ ಇ-ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ತಿಳಿಸಿದ್ದಾರೆ.

ಹೇಗೆ ಕಾರ್ಯ ನಿರ್ವಹಿಸುತ್ತದೆ?

ಕಂಡಕ್ಟರ್ ಪ್ರಯಾಣಿಕರಿಗೆ ಎಲ್ಲಿಗೆ ಹೋಗಬೇಕು ಎಂದು ಕೇಳಿ ಟಿಕೆಟ್ ಜನರೇಟ್ ಮಾಡಿದಾಗ ಅದರೊಂದಿಗೆ ಇಟಿವಿಎಂನಲ್ಲಿ ಡೈನಾಮಿಕ್ ಕ್ಯೂಆರ್ ಕೋಡ್ ಬರುತ್ತದೆ. ಪ್ರಯಾಣಿಕರು ಸ್ಕ್ಯಾನ್ ಮಾಡಿದರೆ ಅವರು ತಲುಪಬೇಕಾದ ಸ್ಥಳಕ್ಕೆ ತಗಲುವ ಮೊತ್ತ ಪಾವತಿಯಾಗುತ್ತದೆ. ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ತುಂಬಿಸಲು ಬಳಸುವ ಇ-ಪೇಮೆಂಟ್ ಮಾದರಿಯಲ್ಲಿ ಇದು ಕೆಲಸ ಮಾಡುತ್ತದೆ. ಎಂದಿನಂತೆ ಹಣ ನೀಡಿ ಟಿಕೆಟ್ ಪಡೆಯುವ ವ್ಯವಸ್ಥೆಯೂ ಇರುತ್ತದೆ.

ನಗರ ಬಸ್‌ಗಳಿಗೆ ಅಲ್ಲದೆ ಈ ವ್ಯವಸ್ಥೆಯನ್ನು ಮೈಸೂರು-ಬೆಂಗಳೂರು ನಡುವೆ ಸಂಚರಿಸುವ 300 ನಾನ್ ಸ್ಟಾಪ್ ಬಸ್‌ಗಳಲ್ಲಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಶಟಲ್, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಹಾಲಿ ಇರುವ ಟಿಕೆಟ್ ಮೆಷಿನ್‌ನಿಂದ ಒಬ್ಬರಿಗೆ ಟಿಕೆಟ್ ಕೊಡಲು ಕನಿಷ್ಠ ಒಂದೂವರೆ ನಿಮಿಷ ಬೇಕಿತ್ತು, ಇದೀಗ ಕೆಲವೇ ಸೆಕೆಂಡ್‌ನಲ್ಲಿ ಟಿಕೆಟ್ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+