ಮೈಸೂರ್ ಟು ಮುಂಬೈ ಸಂಚಾರಕ್ಕೆ ವಿಶೇಷ ಐಶಾರಾಮಿ ಬಸ್
ಮೈಸೂರು, ಜೂನ್ 11: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮೈಸೂರಿನಿಂದ ಪ್ರತಿನಿತ್ಯ ಮುಂಬೈಗೆ ಅಂತರರಾಜ್ಯ ಐಶಾರಾಮಿ ಬಸ್ ಸೌಲಭ್ಯ ಆರಂಭಿಸಿದೆ. ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ಐರಾವತ ಅಂಬಾರಿ ಡ್ರೀಮ್ ಕ್ಲಾಸ್ ಮಾದರಿಯ ಎಸಿ ಸ್ಲೀಪರ್ ವಾಹನಕ್ಕೆ ಚಾಲನೆ ನೀಡಲಾಗಿದೆ. ಈ ಹಿಂದೆ ಐರಾವತ ಕ್ಲಬ್ ಕ್ಲಾಸ್ ಸೌಲಭ್ಯವಿತ್ತು.
ನಿತ್ಯ ಮಧ್ಯಾಹ್ನ 1 ಗಂಟೆಗೆ ಮೈಸೂರಿನಿಂದ ಹೊರಟು ಕೆ.ಆರ್.ಪೇಟೆ, ಶ್ರವಣಬೆಳಗೊಳ, ಅರಸೀಕೆರೆ, ಶಿವಮೊಗ್ಗ, ಹರಿಹರ, ಹಾವೇರಿ, ಹುಬ್ಬಳ್ಳಿ, ಬೆಳಗಾವಿ, ಕೊಲ್ಲಾಪುರ, ಪುಣೆ ಮಾರ್ಗವಾಗಿ ಮಾರನೇ ದಿನ ಬೆಳಿಗ್ಗೆ 9 ಗಂಟೆಗೆ ಮುಂಬೈ ತಲುಪುತ್ತದೆ. ಹಾಗೆಯೇ, ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮಾರನೇ ದಿನ ಬೆಳಿಗ್ಗೆ 9ಕ್ಕೆ ಮೈಸೂರಿಗೆ ಬರಲಿದೆ. 1,100 ಕಿ.ಮೀ ದೂರದ, 20 ಗಂಟೆ ಅವಧಿಯ ಒಂದು ಕಡೆಯ ಪ್ರಯಾಣ ದರ 2,000 ರೂಪಾಯಿ ಇರಲಿದೆ. ಈ ಬಸ್ 40 ಸೀಟುಗಳ ಸೌಲಭ್ಯ ಹೊಂದಿದೆ.

ಕೇಂದ್ರ ಕಚೇರಿಯಿಂದ ನೂತನ ಎರಡು ಐಶಾರಾಮಿ ಬಸ್ಗಳನ್ನು ಒದಗಿಸಲಾಗಿದೆ. ಆ ಎರಡೂ ಬಸ್ಗಳು ಮೈಸೂರು-ಮುಂಬೈ ಮಧ್ಯೆ ಸಂಚರಿಸಲಿವೆ. ಮೊದಲ ದಿನವೇ ಎಲ್ಲಾ ಸೀಟುಗಳು ಭರ್ತಿಯಾಗಿದ್ದವು. ಸದ್ಯ ಇರುವ ಐರಾವತ ಸ್ಲೀಪರ್ ಕೋಚ್ ಸೇವೆಯನ್ನು ಡ್ರೀಮ್ ಸೇವೆಯನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಿದ್ದು, ಮುಂದೆ ಚೆನ್ನೈ, ಹೈದರಾಬಾದ್, ಬೆಳಗಾವಿ ಇನ್ನಿತರ ಕಡೆಗಳಿಗೆ ಡ್ರೀಮ್ ಕ್ಲಾಸ್ ಬಸ್ ಗಳನ್ನು ಪರಿಚಯಿಸುವ ಉದ್ದೇಶವಿದೆ ಎಂದು ಕೆಎಸ್ ಆರ್ ಟಿಸಿ ಗ್ರಾಮಾಂತರ ಡಿಸಿ ಅಶೋಕ್ ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications