ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮೂಲದ ಯುವತಿಗೆ ಯುಪಿಎಸ್ ‌ಸಿಯಲ್ಲಿ 465ನೇ rank

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 04: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ದೇಶದ ಅತ್ಯುನ್ನತ ನಾಗರೀಕ ಸೇವೆಗಳ ನೇಮಕಕ್ಕೆ 2019ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮೈಸೂರು ಮೂಲದ ಕೆ.ಟಿ. ಮೇಘನಾ ಅವರು 465ನೇ rank ಪಡೆದಿದ್ದಾರೆ.

Recommended Video

Ayodhya Rambhoomi ಪೂಜೆಗೆ Karnatakaದ 8 ಮಂದಿಗೆ ಆಹ್ವಾನ | Oneindia Kannada

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ಇವರು ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ. ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ
ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ, ಶೇ.70ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ ‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

 Mysuru Based KT Meghana Got 465th Rank In UPSC Exam 2019

 ಯುಪಿಎಸ್ ಸಿ ಪರೀಕ್ಷೆ; ಕಡೂರಿನ ಯಶಸ್ವಿನಿಗೆ 71ನೇ rank ಯುಪಿಎಸ್ ಸಿ ಪರೀಕ್ಷೆ; ಕಡೂರಿನ ಯಶಸ್ವಿನಿಗೆ 71ನೇ rank

ಶಾಲಾ-ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ rank ಪಡೆದು ಪಾಸಾಗಿದ್ದು, ಸದ್ಯ ಬೆಂಗಳೂರಿನಲ್ಲಿ ಖಜಾನೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗಳ ಸಾಧನೆ ಬಗ್ಗೆ ಪೋಷಕರು, ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

English summary
Mysuru piriyapatna based KT Meghana got 465th rank In UPSC Exam 2019
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X