'ಒಳಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆ'

ಮೈಸೂರು, ಅಕ್ಟೋಬರ್‌ 29: ಅಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣವನ್ನು ತಿರಸ್ಕರಿಸುವಂತೆ ಹಾಗೂ ಕಾಂತರಾಜು ಆಯೋಗದ ವರದಿಯನ್ನು ಬಹಿರಂಗ ಪಡಿಸುವಂತೆ ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಅಧ್ಯಕ್ಷ ಡಿ.ಎನ್.ಮುತ್ತು ರಾಜು ಆಗ್ರಹಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ ಒಳಮೀಸಲಾತಿಯ (ವರ್ಗೀಕರಣ) ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಸಪ್ತಪೀಠವು ತೀರ್ಪು ನೀಡಿದ್ದು ಸರಿಯಷ್ಟೆ. ಈ ಬಗ್ಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತಾಗಿ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಒಳಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆಯಾಗಿದೆಯಾಗಿದೆ ಎಂದರು.

Kuluva Mahasangha Has Demanded Rejection Of The Scheduled Castes Internal Reservation

ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಕುರಿತಾದ ಸಮಗ್ರ ಹಾಗೂ ವಸ್ತುನಿಷ್ಟ ಅಂಕಿ-ಅಂಶಗಳ ಕುರಿತಾದ ಕೊರತೆ ಇದ್ದು, ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣ ಕುರಿತಾಗಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಮೈಸೂರು ಜಿಲ್ಲಾ ಕುಳುವ ಮಹಾಸಂಘವು ತೀವೃವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಪರಿಶಿಷ್ಟ ಜಾತಿಗಳ ನಡುವೆ ಒಳಮೀಸಲಾತಿ ಕಲ್ಪಿಸಲು ರಾಜ್ಯದಲ್ಲಿ 101 ಪರಿಶಿಷ್ಟ ಜಾತಿಗಳ ನಡುವಿನ ಮೀಸಲಾತಿ ಹಂಚಿಕೆಯ ಕುರಿತಾದ ಸಮಗ್ರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯವನ್ನು ಖಾತ್ರಿಪಡಿಸಲು ಸಮರ್ಥನೀಯ ಹಾಗೂ ವೈಜ್ಞಾನಿಕ ದತ್ತಾಂಶಗಳನ್ನು ಕ್ರೋಢಿಕರಿಸಿ, ವಿಶ್ಲೇಷಿಸಿ ತಜ್ಞರ ವರದಿಯನ್ನು ಪಡೆದು ಕೊಳ್ಳದ ಹೊರತು, ಸರ್ಕಾರವು ಯಾವುದೇ ಕ್ರಮವನ್ನು ಕೈಗೊಳ್ಳದಂತೆ ರಾಜ್ಯದ ದಮನಿತ ಹಾಗೂ ಅವಕಾಶ ವಂಚಿತ ಅಲೆಮಾರಿ ಕೊರಮ-ಕೊರಚ-ಕೊರವ ಸಮುದಾಯಗಳ ಪರವಾಗಿ ಮೈಸೂರು ಜಿಲ್ಲಾ ಕುಳುವ ಮಹಾಸಂಘವು ಈ ಪತ್ರಿಕಾ ಗೋಷ್ಠಿಯ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.

ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ ಮಾತನಾಡಿ, 2011ರ ಜನಗಣತಿ ಆಧರಿಸಿ ಒಳಮೀಸಲಾತಿ ವರ್ಗಿಕರಣ ಮಾಡಿರುವುದು ಸರಿಯಲ್ಲ. ಇದರಿಂದ ಅವಕಾಶ ವಂಚಿತ ಕೊರಮ, ಕೊರಚ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಅಲ್ಲದೇ ಜಾತಿಗಣತಿ ವರದಿಯನ್ನು ಬಹಿರಂಗಗೊಳಿಸಿದ ನಂತರ ಜಾತಿಗಣತಿ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಕಾರ್ಯಾಧ್ಯಕ್ಷ ಪಿ.ನಾಗರಾಜು ಮಾತನಾಡಿ, ಪರಿಶಿಷ್ಟ ಜಾತಿಯ ಅಲೆಮಾರಿ ಕೊರಮ, ಕೊರಚ ಸಮುದಾಯಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ತದಲ್ಲಿ ಅವಕಾಶವಿಲ್ಲದೆ ತಬ್ಬಲಿಯಾಗಿದೆ. ಹಾಗಾಗಿ ಒಳಮೀಸಲಾತಿ ವರ್ಗೀಕರಣ ಪಾರದರ್ಶಕ ವಾಗಿರಬೇಕು. ಪ್ರಸ್ತುತ ಜನಸಂಖ್ಯೆಗೆ ಆದಾರವಾಗಿ ಒಳಮೀಸಲಾತಿ ಹಂಚಿಕೆಯಾಗಬೇಕು ಎಂದು ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಯೋಗಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಜಂಟಿ ಕಾರ್ಯದರ್ಶಿ ಎನ್.ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ, ಹೆಚ್.ಡಿ.ಕೋಟೆ ತಾಲ್ಲೂಕು ಅಧ್ಯಕ್ಷ ಪುರುಷೋತ್ತಮ್ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+