ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡಿಪುರ ಕಾಡ್ಗಿಚ್ಚು: ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ

|
Google Oneindia Kannada News

ಮೈಸೂರು, ಫೆಬ್ರವರಿ 27: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕಾಡ್ಗಿಚ್ಚಿನಿಂದ ತತ್ತರಿಸಿರುವ ಬಂಡೀಪುರ ಹಾಗೂ ಹಿಮವತ್ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದರು.

ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿದ್ದಿದ್ದ ಕಾಡ್ಗಿಚ್ಚಿನ ಪರಿಣಾಮವನ್ನು ಹೆಲಿಕಾಪ್ಟರ್ ಮೂಲಕ ಕುಮಾರಸ್ವಾಮಿ ವೀಕ್ಷಿಸಿದರು. ಅರಣ್ಯ ಅಧಿಕಾರಿಗಳೊಂದಿಗೆ ಮಾತನಾಡಿ ನಷ್ಟದ ಅಂದಾಜು ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಈಗ ಪರಿಸ್ಥಿತಿ ಹೇಗಿದೆ ಗೊತ್ತಾ? ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಈಗ ಪರಿಸ್ಥಿತಿ ಹೇಗಿದೆ ಗೊತ್ತಾ?

ಇನ್ಫೋಸಿಸ್ ಸಹಯೋಗದಲ್ಲಿ ನಿರ್ಮಿಸಿದ ಆಸ್ಪತ್ರೆ ಉದ್ಘಾಟನೆ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಕೊಡುಗೆಯಾಗಿ ನೀಡುತ್ತಿರುವ 300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

Kumaraswamy did Aerial Survey of Bandipura forest fire

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾ ಮೂರ್ತಿ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕಿ ಸೌಮ್ಯ ರೆಡ್ಡಿ, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮತ್ತಿತರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಂಡೀಪುರದಲ್ಲಿ ನಿಯಂತ್ರಣದತ್ತ ಕಾಡ್ಗಿಚ್ಚು:ಇಬ್ಬರ ಬಂಧನ, 15 ಮಂದಿ ವಶ ಬಂಡೀಪುರದಲ್ಲಿ ನಿಯಂತ್ರಣದತ್ತ ಕಾಡ್ಗಿಚ್ಚು:ಇಬ್ಬರ ಬಂಧನ, 15 ಮಂದಿ ವಶ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಿಸಿದರು. ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕ ಎಂ.ಶ್ರೀನಿವಾಸ ಮತ್ತಿತರು ಈ ಸಂದರ್ಭದಲ್ಲಿ ಹಾಜರಿದ್ದರು.

Kumaraswamy did Aerial Survey of Bandipura forest fire

ಸಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯಲ್ಲಿ ರೈತರ ಸಾಲಮನ್ನಾ - ಋಣಮುಕ್ತ ಪತ್ರಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಹುತಾತ್ಮ ಯೋಧ ಹೆಚ್. ಗುರು ಅವರ ಪತ್ನಿ ಕಲಾವತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ಇತ್ತರು. ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕ ಎಂ.ಶ್ರೀನಿವಾಸ ಮತ್ತಿತರು ಈ ಸಂದರ್ಭದಲ್ಲಿ ಹಾಜರಿದ್ದರು.

English summary
HD Kumaraswamy did aerial survey of Bandipura forest fire. Along with forest officers. In other program in Kumaraswamy also inaugurates 300 beds hospital built in assosiation with Infosys in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X