• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜನತಾ ಜಲಧಾರೆ ಯಶಸ್ಸಿಗೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

|
Google Oneindia Kannada News

ಮೈಸೂರು, ಮೇ 13: ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಸಮಾವೇಶ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿ ಆಗಲೆಂದು ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಸಮಾವೇಶ ಯಶಸ್ವಿ ಆಗುತ್ತದೆ ಎಂದರು.

ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ ಎಂದು ಹೇಳಿದರು.

ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ರಾಜ್ಯದಲ್ಲಿ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೆ. ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ ಎಂದು ತಿಳಿಸಿದರು.

Kumaraswamy worshiped Chamundeshwari for the success of Janata Jaladhare

ಸಮರ್ಥ ಅಭ್ಯರ್ಥಿ ಕಣಕ್ಕೆ:

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೆಚ್ ಡಿಕೆ ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಮುಂತಾದವರು ಹಾಜರಿದ್ದರು.

   ಮಕ್ಕಳಿಗೆ ಟೊಮ್ಯಾಟೋ ಜ್ವರದ ಎಫೆಕ್ಟ್!!! ರೋಗ ಲಕ್ಷಣಗಳು&ಪರಿಹಾರಗಳು | Oneindia Kannada
   English summary
   Former Chief Minister HD Kumaraswamy special pooja to Mysuru Chamundeshwari for success of Janata Jaladhare.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X