ದಕ್ಷಿಣ ಕಾಶಿ ತಿರುಮಕೂಡಲಿನಲ್ಲಿ ಇಂದಿನಿಂದ ಕುಂಭಮೇಳ ಆರಂಭ: ಇಲ್ಲಿದೆ ಸಂಪೂರ್ಣ ವಿವರ
ಮೈಸೂರು, ಫೆಬ್ರವರಿ 10: ದಕ್ಷಿಣ ಭಾರತದಲ್ಲಿ ನಡೆಯುವ ಪವಿತ್ರ ಕುಂಭಮೇಳ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಸೋಮವಾರ(ಫೆ.10)ದಿಂದ ಆರಂಭವಾಗಿದ್ದು, ಬುಧವಾರ(ಫೆ.12)ದವರೆಗೆ ಮೂರು ದಿನಗಳ ನಡೆಯಲಿದ್ದು, ಈ ಸಂಬಂಧ ಭಕ್ತರು ಆಗಮಿಸುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದೆ.
ಇಡೀ ತಿ.ನರಸೀಪುರ ಕುಂಭಮೇಳಕ್ಕೆ ಸಾಕ್ಷಿಯಾಗಿದ್ದು, ಸಂಭ್ರಮ ಸಡಗರ ಮನೆಮಾಡಿದ್ದರೆ ಭಕ್ತಿಯ ಪರಾಕಾಷ್ಠೆ ಮೇಳೈಸುತ್ತಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಮಿಂದು ಪಾವನರಾಗಲು ಭಕ್ತರು ತಂಡೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

ಕಾವೇರಿ, ಕಪಿಲಾ ಮತ್ತು ಗುಪ್ತಗಾಮಿನಿಯಾಗಿರುವ ಸ್ಪಟಿಕ ಸರೋವರ ಸಂಧಿಸುವ ತಿರುಮಕೂಡಲು ತ್ರಿವೇಣಿ ಸಂಗಮವು ಪವಿತ್ರ ಕ್ಷೇತ್ರವಾಗಿದ್ದು, ಇಲ್ಲಿಗೆ ಪ್ರತಿದಿನವೂ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದಲ್ಲದೆ, ಧಾರ್ಮಿಕ ಕೈಂಕರ್ಯಗಳನ್ನು ಮುಗಿಸಿಕೊಂಡು ಹೋಗುತ್ತಾರೆ. ಆದರೆ ಕುಂಭಮೇಳದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪುಣ್ಯಸ್ನಾನ ಮಾಡುವುದು ವಿಶೇಷ. 2019ರ ನಂತರ 2022ರಲ್ಲಿ ಕುಂಭಮೇಳ ನಡೆಯಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ನಡೆದಿರಲಿಲ್ಲ. ಹೀಗಾಗಿ ಈ ಬಾರಿಯ ಕುಂಭಮೇಳಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಇದೀಗ ಕುಂಭಮೇಳಕ್ಕೆ ಚಾಲನೆ ದೊರೆತಿದ್ದು, ಸೋಮವಾರ ಬೆಳಗ್ಗೆ 9ಗಂಟೆಗೆ ಅಗಸ್ತೇಶ್ವರ ಸ್ವಾಮಿ ದೇಗುಲದಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ಮೂಲಕ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ, ಅತಿಥಿಗಳಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ. ಇದಾದ ನಂದರ ನದಿ ತಟದಲ್ಲಿ ಸ್ವಾಮೀಜಿಗಳಿಗೆ ಕುಟೀರ ವ್ಯವಸ್ಥೆ ಮಾಡಲಾಗಿದ್ದು, ಸಾಧುಗಳು ಮಠಾಧೀಶರಿಗೆ ನಡುಹೊಳೆ ಬಸಪ್ಪನ ಸನ್ನಿಧಿಯಲ್ಲಿ ಸ್ನಾನಕ್ಕೆ ಸ್ಥಳ ಮೀಸಲಿರಿಸಲಾಗಿದೆ. ಅತಿ ಗಣ್ಯರ ಸ್ನಾನಕ್ಕೆ ಪ್ರತ್ಯೇಕ ಸ್ಥಳವನ್ನು ನಿಗದಿ ಮಾಡಲಾಗಿದ್ದು, ಇಲ್ಲಿ ಪುಣ್ಯಸ್ನಾನ ನೆರವೇರಲಿದೆ.

ಕುಂಭಮೇಳದಲ್ಲಿ ಭಾಗವಹಿಸುವ ಸ್ವಾಮೀಜಿಗಳನ್ನು ಗುಂಜಾನರಸಿಂಹಸ್ವಾಮಿ ದೇವಸ್ಥಾನ, ವಿಶ್ವಕರ್ಮ ಬೀದಿ, ಭಗವಾನ್ ಟಾಕೀಸ್ ವೃತ್ತ, ಲಿಂಕ್ ರಸ್ತೆ, ಬಸ್ ನಿಲ್ದಾಣ ಮೂಲಕ ತ್ರಿವೇಣಿ ಸಂಗಮಕ್ಕೆ ಮಂಗಳವಾದ್ಯ, ವೀರಗಾಸೆ, ಭಜನಾ ತಂಡಗಳು, ಕೊಂಬು ಕಹಳೆ, ಕಳಶ ಹೊತ್ತ ಸುಮಂಗಲಿಯರು, ಕಂಸಾಳೆ, ಪೂಜಾ ಕುಣಿತ, ಗರುಡಿ ಕುಣಿತ, ಕೋಲಾಟ, ವೀರಮಕ್ಕಳ ಕುಣಿತ, ಕೀಲುಕುದುರೆ, ಪಟ ಕುಣಿತ, ತಮಟೆ ಬಡಿತ, ಬ್ಯಾಂಡ್ ಸೆಟ್ ಮತ್ತು ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಕರೆತರಲಾಗುತ್ತಿದೆ.
ಕುಂಭಮೇಳದ ಕೊನೆಯ ದಿನವಾದ ಬುಧವಾರ ಬೆಳಗ್ಗೆ 9 ರಿಂದ 9.30ರೊಳಗೆ ಪವಿತ್ರ ಕುಂಭಸ್ನಾನ ನಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗು ತಜ್ಞರು, ತೆಪ್ಪ-ದೋಣಿ ನಿಯೋಜಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ನೂರಾರು ಪೊಲೀಸರು ಸರ್ವಸನ್ನದ್ಧರಾಗಿದ್ದಾರೆ. ಕುಂಭಮೇಳದ ಆರಂಭದ ಬಗ್ಗೆ ಹೇಳಬೇಕೆಂದರೆ ದಕ್ಷಿಣ ಭಾರತದ ಪ್ರಯಾಗ ವೆಂದೇ ಖ್ಯಾತಿ ಪಡೆದಿರುವ, ಕಾಶಿಗಿಂತಲೂ ಒಂದು ಗುಲಗಂಜಿ ತೂಕ ಹೆಚ್ಚು ಪುಣ್ಯ ಕ್ಷೇತ್ರವೆಂದು ನಂಬಿರುವ ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿ ಸ್ಪಟಿಕ ಸರೋವರಗಳ ಸಂಗಮ ಕ್ಷೇತ್ರ ತ್ರಿವೇಣಿ ಸಂಗಮದಲ್ಲಿ 1989ರಲ್ಲಿ ಆರಂಭಗೊಂಡ ಕುಂಭಮೇಳ ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುತ್ತಾ ಬಂದಿದೆ.
ಪುಣ್ಯಸ್ನಾನಕ್ಕೆ ಮುಹೂರ್ತ ನಿಗದಿ
ಈ ಬಾರಿ ಪೂರ್ಣ ಕುಂಭಮೇಳದ ನಂತರ ಈಗ 13ನೇ ಕುಂಭಮೇಳ ನಡೆಯುತ್ತಿದೆ. 2019ರ ಬಳಿಕ 2022ರಲ್ಲಿ ಕುಂಭಮೇಳ ಆಚರಣೆ ಬಂದಿತ್ತಾದರೂ ಕೋವಿಡ್ ಹಿನ್ನೆಲೆಯಲ್ಲಿ ಪೂಜೆಗಷ್ಟೆ ಸೀಮಿತವಾಗಿತ್ತು. ಈ ಬಾರಿ ಅದ್ಧೂರಿಯಾಗಿ ಕುಂಭಮೇಳ ನಡೆಯುತ್ತಿದೆ. ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸರ್ವರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಭಕ್ತರು, ಸಾಧು ಸಂತರು, ಸಾರ್ವಜನಿಕರಿಗೆ ಅವಶ್ಯವಿರುವ ಸೌಕರ್ಯ ಒದಗಿಸಲಾಗಿದೆ. ಭಕ್ತಾದಿಗಳು ಪುಣ್ಯಸ್ನಾನಕ್ಕೆ ತೆರಳಲು ಬ್ಯಾರಿಕೇಡ್ ನಿರ್ಮಿಸಲಾಗಿದೆ.
ಉತ್ಸವದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸ್ವಯಂ ಸೇವಕರು ಕೂಡ ಕಾರ್ಯ ನಿರ್ವಹಿಸಲಿದ್ದಾರೆ. ಸ್ವಚ್ಛತೆಗಾಗಿ 200ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಫೆ.12ರಂದು ಬುಧವಾರ ಬೆಳಗ್ಗೆ 11ರಿಂದ 11.30 ಹಾಗೂ ಮಧ್ಯಾಹ್ನ 1.30ರಿಂದ 2 ಗಂಟೆ ನಡುವೆ ಪುಣ್ಯಸ್ನಾನಕ್ಕೆ ಮುಹೂರ್ತ ನಿಗದಿಯಾಗಿದೆ. ಪುಣ್ಯಸ್ನಾನದ ಸಂದರ್ಭದಲ್ಲಿ ವಿಶ್ವಶಾಂತಿಗಾಗಿ ನದಿ ಸಂಗಮದ ನೆಲೆಯಲ್ಲಿ ಹೋಮ ಹವನ ಜಪ-ತಪ ಅಭಿಷೇಕ ಪೂರ್ಣಾಹುತಿ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತದೆ. ವಿವಿಧ ಧರ್ಮಾಚಾರ್ಯರ ಹಾಗೂ ಪ್ರಾಜ್ಞರ ಧರ್ಮೋಪದೇಶಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಇದೆಲ್ಲದರ ನಡುವೆ ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ದಕ್ಷಿಣ ಭಾರತದ ಮಹಾಕುಂಭ ಮೇಳಾದ ಪವಿತ್ರ ಪ್ರಾಂಗಣದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಹಾಗೂ ಶಿವ ದರ್ಶನ ಪ್ರದರ್ಶನ ನಡೆಯುತ್ತಿದೆ. ಹಳೆ ತಿರುಮಕೂಡಲು ಶ್ರೀ ಚೌಡೇಶ್ವರಿ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿರುವ ಓಂ ಶಾಂತಿ ಮಂಟಪದಲ್ಲಿ ಸಾರ್ವಜನಿಕರಿಗಾಗಿ ಬೆಳಗ್ಗೆ 7ರಿಂದ ಸಂಜೆ 9ಗಂಟೆಯವರೆಗೆ ಮೂರು ದಿನಗಳು ಉಚಿತವಾಗಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications