ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡಕುಸಿತ: ಸಂಚಾರಕ್ಕೆ ನಿರ್ಬಂಧ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 21: ಸತತ 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದೆ. ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ 'ಸುಸ್ವಾಗತ' ವಿದ್ಯುತ್ ಬೋರ್ಡ್ ಸಮೀಪ ಈ ಭೂಕುಸಿತ ಸಂಭವಿಸಿದೆ. ಸುಮಾರು 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಭಾರೀ ಮಳೆಯಿಂದಾಗಿ ನಂದಿ ದೇವಸ್ಥಾನ ಬಳಿಯ ರಸ್ತೆಯ ತಡೆಗೋಡೆ ಹಾಗೂ ರಸ್ತೆಯ ಕೆಲ ಭಾಗವೂ ಕುಸಿದಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ಯಾವುದೇ ವಾಹನಗಳ ಸಂಚಾರ ಇಲ್ಲದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Mysuru: Landslide In The Chamundi Hills Road: Restriction To Traffic

ಮೈಸೂರಿನಲ್ಲಿ ಬುಧವಾರ ಧಾರಾಕಾರ ಮಳೆ ಸುರಿದಿದ್ದು, ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು.

ಇದೀಗ ಮತ್ತೆ ಇದೇ ಘಟನೆ ನಡೆದಿರುವುದು ಸಹಜವಾಗಿ ಮೈಸೂರಿನ ಜನತೆ ಅದರಲ್ಲೂ ಚಾಮುಂಡಿ ಬೆಟ್ಟಕ್ಕೆ ಹೊಂದಿಕೊಂಡಂತಿರುವ ಮನೆಗಳಲ್ಲಿ ವಾಸವಾಗಿರುವ ಜನರಲ್ಲಿ ಆತಂಕ ಮೂಡಿಸಿದೆ.

Mysuru: Landslide In The Chamundi Hills Road: Restriction To Traffic

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದೆ
ರಾಜ್ಯದಲ್ಲಿ ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Mysuru: Landslide In The Chamundi Hills Road: Restriction To Traffic

ಹವಾಮಾನ ವೈಪರೀತ್ಯದಿಂದ ರಾಜ್ಯದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅ.26 ರಂದು ರಾಜ್ಯದಿಂದ ಮುಂಗಾರು ನಿರ್ಗಮಿಸಲಿದ್ದು, ಹಿಂಗಾರು ಮಾರುತಗಳು ಕಾಲಿಡಲಿವೆ. ಈ ಹಿನ್ನೆಲೆಯಲ್ಲಿ ಮಳೆಯ ಪ್ರಮಾಣ ತುಸು ಏರಿಕೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದುರಸ್ತಿ ಕಾರ್ಯಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಸೂಚನೆ
ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡಕುಸಿತ ಉಂಟಾಗಿದ್ದು, ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಲು ಮೈಸೂರು ಜಿಲ್ಲಾಧಿಕಾರಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಖಡಕ್ ಸೂಚನೆ ನೀಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚನೆ ನೀಡಿದ್ದಾರೆ.

English summary
The impact of heavy rainfall for 10 consecutive days has caused a landslide on the Chamundi Hills of Mysuru on Wednesday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X