ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

BPL Card : ಉಳ್ಳವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಕಾನೂನು ಕ್ರಮ: ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ

|
Google Oneindia Kannada News

ಮೈಸೂರು; ಏ.13: "ಉಳ್ಳವರು ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಪಡೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು‌ ಕ್ರಮ ಕೈಗೊಳ್ಳಲಿದೆ," ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದ್ದು.ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ‌ ಜರುಗಿಸಲಾಗುವುದು," ಎಂದರು.

 ತಿಂಗಳಲ್ಲಿ 2 ಬಾರಿ ಬೃಹತ್ ಆರೋಗ್ಯ ಮೇಳದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಗೋಪಾಲಯ್ಯ ತಿಂಗಳಲ್ಲಿ 2 ಬಾರಿ ಬೃಹತ್ ಆರೋಗ್ಯ ಮೇಳದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಗೋಪಾಲಯ್ಯ

"ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು," ಎಂದು ತಿಳಿಸಿದರು.

Legal Action Aginst People Who has BPL Card Without Eligibility Says Karnataka Minister K. Gopalaiah

"ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಬಡವರಿಗೋಸ್ಕರ ಇರುವ ಯೋಜನೆಯನ್ನು ಇತರರು ಪಡೆಯಬಾರದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಪುನರುಚ್ಚರಿಸಿದರು.

 ಕರ್ನಾಟಕದಲ್ಲಿ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು, ಕಾರಣವೇನು? ಕರ್ನಾಟಕದಲ್ಲಿ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು, ಕಾರಣವೇನು?

ಬಿಪಿಎಲ್ ಕಾರ್ಡ್ ದುರ್ಬಳಕೆ ತಡೆಯಲು ಈ ಯೋಜನೆ

"ಸ್ವಂತ ಮನೆ ಹೊಂದಿ 2-3 ಮಹಡಿಯ ಮನೆ ಕಟ್ಟಿಕೊಂಡು ಇರುವವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ. ಬಿಪಿಎಲ್ ಕಾರ್ಡ್ ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದ್ದು ಇದರ ದುರ್ಬಳಕೆ ತಡೆಯಲು ಈ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಕೇಂದ್ರ ಸರ್ಕಾರ ದೇಶದಲ್ಲಿ ಎಂಬತ್ತು ಕೋಟಿ ಜನರಿಗೆ ಬಿಪಿಎಲ್ ಕಾರ್ಡ್ ಮುಖಾಂತರ ಆಹಾರ ಒದಗಿಸುತ್ತಿದ್ದು ಕೇಂದ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸಿ ಅಂತ್ಯೋದಯ ಕಾರ್ಡ್ ಗೆ ತಲಾ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ," ಎಂದು ತಿಳಿಸಿದರು.

Legal Action Aginst People Who has BPL Card Without Eligibility Says Karnataka Minister K. Gopalaiah

ಬಿಪಿಎಲ್ ಕಾರ್ಡ್ ಪಡೆಯಲು ಮಾನದಂಡಗಳು ಯಾವುದು?

2017ಕ್ಕೆ ಹೊರಡಿಸಿದ ಪರಿಷ್ಕೃತ ಮಾನದಂಡದ ಪ್ರಕಾರ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸಂಸ್ಥೆಗಳು/ಮಂಡಳಿಗಳು ನಿಗಮಗಳು, ಆದಾಯ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ. ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ.

ಇನ್ನು ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗೆ ಅರ್ಹವಲ್ಲ. ಪ್ರತಿ ತಿಂಗಳು 150 ಯುನಿಟ್‌ಗಳಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಅರ್ಹರಲ್ಲ.

Recommended Video

kgf press meet ಸಂದರ್ಭದಲ್ಲಿ ಯಶ್ ನ ಟಾರ್ಗೆಟ್ ಮಾಡಿದ ತೆಲುಗು ಮಾಧ್ಯಮ! | Oneindia Kannada

ಆರ್ಥಿಕವಾಗಿ ಸದೃಢವಾಗಿರುವವರು, ಸರ್ಕಾರಿ ನೌಕರರೂ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಹಲವರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ. ಹೀಗೆ ತಪ್ಪು ಮಾಹಿತಿ ನೀಡಿ ಪಡೆಯಲಾಗಿದ್ದ ಸುಮಾರು 94 ಸಾವಿರ ಬಿಪಿಎಲ್‌ ಹಾಗೂ ಎಎವೈ ಪಡಿತರ ಚೀಟಿಗಳನ್ನು ಕಳೆದ ವರ್ಷ ಸರ್ಕಾರ ರದ್ದುಗೊಳಿಸಿದೆ.

English summary
Legal Action Aginst People Who has BPL Card Without Eligibility Says Karnataka Minister K. Gopalaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X