ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಳೇ ಮೈಸೂರು ಪ್ರಾಂತ್ಯದಲ್ಲಿ ಮತ್ತೆ ಪ್ರಾಬಲ್ಯ ಮೆರೆದ ಸಿದ್ದರಾಮಯ್ಯ!

By C. Dinesh
|
Google Oneindia Kannada News

ಮೈಸೂರು, ಡಿಸೆಂಬರ್ 14; ಭಾರೀ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಹಳೇ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ ಅಲೆ ಜೋರಾಗಿದೆ. ಆ ಮೂಲಕ ಮಾಜಿ ಮುಖ್ಯಮಂತ್ರಿ‌, ಪ್ರತಿಪಕ್ಷ ಸಿದ್ದರಾಮಯ್ಯ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.

ರಾಜಕೀಯ ಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಪರಿಷತ್ ಫೈಟ್ ಗೆಲುವುಗಾಗಿ ಹಳೇ ಮೈಸೂರು ಪ್ರಾಂತ್ಯದಲ್ಲಿ ಮೂರು ಪಕ್ಷಗಳು ಭಾರೀ ಕಸರತ್ತು ನಡೆಸಿದ್ದವು. ಚುನಾವಣೆ ಗೆಲುವಿಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ. ಎಸ್. ಯಡಿಯೂರಪ್ಪ ಹಾಗೂ ಎಚ್. ಡಿ. ಕುಮಾರಸ್ವಾಮಿ ಮಂಡ್ಯ ಮತ್ತು ಮೈಸೂರು, ಚಾಮರಾಜನಗರ ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸುವ ಮೂಲಕ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಿದ್ದರು.

ವಿಧಾನ ಪರಿಷತ್ ಚುನಾವಣೆ 2021; ಗೆದ್ದವರು, ಸೋತವರ ಪಟ್ಟಿ ವಿಧಾನ ಪರಿಷತ್ ಚುನಾವಣೆ 2021; ಗೆದ್ದವರು, ಸೋತವರ ಪಟ್ಟಿ

ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರ ಈ ಬಾರಿ ಸಾಕಷ್ಟು ರಂಗೇರಿತ್ತು. ಈ ಕ್ಷೇತ್ರವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದ ಪ್ರಮುಖ ನಾಯಕರು ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದರು. ಈ ಪೈಕಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ನಡೆಸಿದ್ದರು.‌ ಈ ಕಾರಣದಿಂದಲೇ ಈ ಬಾರಿಯ ಪರಿಷತ್ ಎಲೆಕ್ಷನ್ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಇದಕ್ಕಾಗಿ ಉಭಯ ನಾಯಕರು ತಮ್ಮದೇ ರಣತಂತ್ರ ರೂಪಿಸಿ ಅಖಾಡಕ್ಕಿಳಿದಿದ್ದರು.

Breaking: ಹಾಸನದಲ್ಲಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಗೆಲುವುBreaking: ಹಾಸನದಲ್ಲಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಗೆಲುವು

Legislative Council Elections Siddaramaiah Showed His Power In Old Mysuru Region

ಮಾಜಿ ಸಿಎಂಗೆ ಟಾಂಗ್ ನೀಡುವ ಉದ್ದೇಶದಿಂದ ತಂತ್ರಗಾರಿಕೆ ರೂಪಿಸಿದ ಜೆಡಿಎಸ್ ನಾಯಕರು, ಸಿದ್ದರಾಮಯ್ಯ ಆಪ್ತ ಸಿ. ಎನ್. ಮಂಜೇಗೌಡರಿಗೆ ಟಿಕೆಟ್ ಕೊಟ್ಟು ಕಾಂಗ್ರೆಸ್ ಪಾಳಯಕ್ಕೆ ಶಾಕ್ ಕೊಟ್ಟಿತ್ತು. ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಲೆಕ್ಕಾಚಾರವನ್ನೆಲ್ಲಾ ತಲೆಕೆಳಗಾಗಿಸುವ ಸಲುವಾಗಿ ಕಾಂಗ್ರೆಸ್, ರಾಜಕೀಯದ ಗಂಧ ಗಾಳಿಯನ್ನೇ ಅರಿಯದ, ಈ ಹಿಂದೆ ಎಂದು ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳದ ಡಾ. ಡಿ. ತಿಮ್ಮಯ್ಯ ಅವರಿಗೆ ಟಿಕೆಟ್ ಕೊಟ್ಟು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇನ್ನೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡುವ ಲೆಕ್ಕಾಚಾರ ಮಾಡಿದ ಬಿಜೆಪಿ, ಕಳೆದ ಬಾರಿ ಸೋಲಿನ‌ ಆಘಾತ ಕಂಡಿದ್ದ ರಘು ಕೌಟಿಲ್ಯ ಅವರನ್ನೇ ಮತ್ತೊಮ್ಮೆ ಕಣಕ್ಕಿಳಿಸಿತ್ತು.

ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ; ಯಾರು, ಏನು ಹೇಳಿದರು?ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ; ಯಾರು, ಏನು ಹೇಳಿದರು?

ಮಂಡ್ಯದಲ್ಲೂ ಟಫ್ ಫೈಟ್; ಸಕ್ಕರೆ ನಾಡು ಮಂಡ್ಯದಲ್ಲೂ ಪರಿಷತ್ ಫೈಟ್ ಗೆಲುವಿಗಾಗಿ ಮೂರು ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದವು. ಜೆಡಿಎಸ್ ಭದ್ರಕೋಟೆ ಆಗಿರುವ ಮಂಡ್ಯದಲ್ಲಿ ಬಿಜೆಪಿ ವತಿಯಿಂದ ಯಡಿಯೂರಪ್ಪ ಆಪ್ತ ಬೂಕಳ್ಳಿ ಮಹೇಶ್ ಕಣಕ್ಕಿಳಿದರೆ, ಜೆಡಿಎಸ್ ಪಕ್ಷದಿಂದ ಅಪ್ಪಾಜಿಗೌಡ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಇಲ್ಲೂ ಕೂಡ ತಮ್ಮ ರಾಜಕೀಯ ಧಾಳ ಉರುಳಿಸಿದ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ‌ ಸಚಿವ ಎಸ್. ಟಿ.‌ ಸೋಮಶೇಖರ್ ಆಪ್ತ ಕಾರ್ಯದರ್ಶಿಯಾಗಿದ್ದ ದಿನೇಶ್ ಗೂಳಿಗೌಡಗೆ ಟಿಕೆಟ್ ಕೊಟ್ಟು ಎದುರಾಳಿ ನಾಯಕರಿಗೆ ದೊಡ್ಡ ಶಾಕ್ ಕೊಟ್ಟಿದ್ದರು.

ಪರಿಷತ್ ಫೈಟ್; ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜೆಡಿಎಸ್!ಪರಿಷತ್ ಫೈಟ್; ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜೆಡಿಎಸ್!

ಫಲ ನೀಡಿದ ಸಿದ್ದು ಮಾಸ್ಟರ್ ಪ್ಲ್ಯಾನ್; ವಿಧಾನ ಪರಿಷತ್‌ ಚುನಾವಣೆಯ ಆರಂಭದಿಂದಲೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ನಿರೀಕ್ಷೆಯಂತೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ತಿಮ್ಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. 2,800 ಮತಗಳಿಂದ ತಿಮ್ಮಯ್ಯ ಜಯಭೇರಿ ಭಾರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ತವರೂರಲ್ಲಿ ಕಾಂಗ್ರೆಸ್ ಪರಾಕ್ರಮ ಮೆರೆದಿದೆ. ಮಂಡ್ಯದಿಂದ ಕಣಕ್ಕಿಳಿದಿದ್ದ ದಿನೇಶ್ ಗೂಳಿಗೌಡ 1500ಕ್ಕೂ ಹೆಚ್ಚು ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಇಬ್ಬರ ಗೆಲುವಿಗೆ ಸಿದ್ದು ಮಾಸ್ಟರ್ ಪ್ಲ್ಯಾನ್ ಪ್ರಮುಖ ಕಾರಣವಾಗಿದೆ.

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಅಭ್ಯರ್ಥಿ‌ ಆಯ್ಕೆಯಲ್ಲೇ ಎದುರಾಳಿಗಳಿಗೆ ಟಾಂಗ್ ಕೊಟ್ಟಿದ್ದ‌ ಮಾಜಿ ಸಿಎಂ, ನಂತರದಲ್ಲಿ ಬಿರುಸಿನ‌ ಪ್ರಚಾರ ಕೂಡ ನಡೆಸಿದ್ದರು. ಅಲ್ಲದೇ ಸ್ಥಳೀಯ ನಾಯಕರಿಗೆ ತಮ್ಮದೇ ಸಲಹೆ, ಸೂಚನೆಗಳನ್ನ ಕೂಡ ಕೊಟ್ಟಿದ್ದ ಸಿದ್ದರಾಮಯ್ಯ, ನಿರೀಕ್ಷಿತ ಫಲಿತಾಂಶ ಪಡೆದಿದ್ದಾರೆ. ಇನ್ನೂ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಹಾಗೂ‌ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ‌ ಶಾಸಕ‌ ಜಿ. ಟಿ. ದೇವೇಗೌಡ ನಡುವಿನ ದೋಸ್ತಿ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಎದುರಾಳಿಗಳಾಗಿದ್ದ ಉಭಯ ನಾಯಕರು, ನಂತರ ಬದಲಾದ ರಾಜಕೀಯ ಬೆಳವಣಿಗೆಗಳ ಪರಿಣಾಮ ದೋಸ್ತಿಗಳಾಗಿ ಕಾಣಿಸಿಕೊಂಡಿದ್ದರು. ಪರಿಷತ್ ಚುನಾವಣೆ ಹೊಸ್ತಿಲಲ್ಲಿ ಈ ಇಬ್ಬರೂ ನಾಯಕರು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಸ್ಥಳೀಯ ಸಂಸ್ಥೆಗಳ ಸದಸ್ಯರ ಸೆಳೆಯುವ ಜೊತೆಗೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆಯಲು ಸಹಕಾರಿ ಆಗಿದೆ.

ಕುಂದಿಲ್ಲ ಸಿದ್ದು ವರ್ಚಸ್ಸು; ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಜಿ. ಟಿ. ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಒಂದು ಕಾಲದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎದುರಾದ ಸೋಲು, ಸಿದ್ದರಾಮಯ್ಯ ಅವರ ರಾಜಕೀಯದ ಅಂತ್ಯ ಎಂದೇ ಬಿಂಬಿಸಲಾಗಿತ್ತು.

ಇದರ ನಡುವೆ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯ ಫಲಿತಾಂಶ ಸಹ ಸಿದ್ದರಾಮಯ್ಯಗೆ ಹಿನ್ನಡೆ ಉಂಟು ಮಾಡಿತ್ತು. ಆದರೆ ಪರಿಷತ್ ಹಣಾಹಣಿಯಲ್ಲಿ ಮೈಸೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿರುವ ಸಿದ್ದರಾಮಯ್ಯ, ಹಳೇ ಮೈಸೂರು ಪ್ರಾಂತ್ಯದಲ್ಲಿ ತಾವು ಕಿಂಗ್ ಮೇಕರ್ ಅನ್ನೋದನ್ನ ಮತ್ತೆ ಸಾಬೀತುಪಡಿಸಿದ್ದಾರೆ.

Recommended Video

ತೆರೆ ಹಿಂದೆ ವಿರಾಟ್ ಮಾಡಿದ್ದನ್ನು ರಿವೀಲ್ ಮಾಡಿದ ಗಂಗೂಲಿ | Oneindia Kannada

English summary
Congress candidates win in Mandya, Maysuru legislative council elections. Former chief minister and leader of opposition showed his power in elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X