ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನ ಪರಿಷತ್ ಚುನಾವಣೆ; ಠೇವಣಿ ಕಳೆದುಕೊಂಡ ವಾಟಾಳ್!

|
Google Oneindia Kannada News

ಮೈಸೂರು, ಜೂನ್ 16; ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಚುನಾವಣೆಯಲ್ಲಿ ಹೀನಾಯವಾಗಿ ಸೋಲುವ ಜೊತೆಗೆ ಠೇವಣಿ ಕಳೆದುಕೊಂಡಿದ್ದಾರೆ.

ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಗೆ ವಾಟಾಳ್ ನಾಗರಾಜ್ ಸ್ಪರ್ಧಿಸಿದ್ದರು. ಬುಧವಾರ ಬೆಳಗ್ಗೆ ಆರಂಭವಾಗಿದ್ದ ಮತ ಎಣಿಕೆ ಗುರುವಾರ ಪೂರ್ಣಗೊಂಡಿದೆ.

ವಿಧಾನ ಪರಿಷತ್ ಫೈಟ್; ಪ್ರಕಾಶ್ ಹುಕ್ಕೇರಿ ಜಯ ವಿಧಾನ ಪರಿಷತ್ ಫೈಟ್; ಪ್ರಕಾಶ್ ಹುಕ್ಕೇರಿ ಜಯ

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ 12,205 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಸಹ ಮುಖಭಂಗ ಉಂಟಾಗಿದೆ.

Breaking: ವಿಧಾನ ಪರಿಷತ್‌: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿಗೆ 8ನೇ ಬಾರಿ ಜಯ Breaking: ವಿಧಾನ ಪರಿಷತ್‌: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿಗೆ 8ನೇ ಬಾರಿ ಜಯ

Legislative Council Elections Vatal Nagaraj Loses Deposit

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೈ. ವಿ. ರವಿಶಂಕರ್, ಜೆಡಿಎಸ್‌ನ ಎಚ್. ರಾಮು ಸೋಲು ಕಂಡಿದ್ದಾರೆ. ಇದೇ ಕ್ಷೇತ್ರದಲ್ಲಿ ವಾಟಾಳ್ ನಾಗರಾಜ್ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ ಮತ್ತು ಠೇವಣಿ ಕಳೆದುಕೊಂಡಿದ್ದಾರೆ.

29 ತಾಸು ಮತ ಎಣಿಕೆ; ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಸುಮಾರು 29 ಗಂಟೆಗಳ ಕಾಲ ನಡೆಯಿತು. ಮತ ಎಣಿಕೆ ಪೂರ್ಣಗೊಳ್ಳುವ ತನಕ ಮತ ಎಣಿಕೆ ಸಿಬ್ಬಂದಿ ಸುಸ್ತಾಗಿ ಹೋದರು. ಬುಧವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಾಗ ಬಂದ ಅಭ್ಯರ್ಥಿಗಳು ತಡ ರಾತ್ರಿ ತನಕ ಇದ್ದರು.

ಗುರುವಾರ ಮುಂಜಾನೆಯೇ ಪುನಃ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದರು. ಮೈಸೂರಿನ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಗುರುವಾರ ಬೆಳಗ್ಗೆ ಪೂರ್ಣಗೊಂಡು ಅಧಿಕೃತವಾಗಿ ಫಲಿತಾಂಶವನ್ನು ಘೋಷಣೆ ಮಾಡಲಾಯಿತು.

ವಿಧಾನ ಪರಿಷತ್ತಿಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತವಿಧಾನ ಪರಿಷತ್ತಿಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ

ಚುನಾವಣೆಗಳಲ್ಲಿ ಸತತ ಸೋಲು; ವಾಟಾಳ್ ನಾಗರಾಜ್ 2008ರ ಬಳಿಕ ವಿವಿಧ ಚುನಾವಣೆಯಲ್ಲಿ ಸತತವಾಗಿ ಸೋಲು ಕಾಣುತ್ತಿದ್ದಾರೆ. ಈಗ ದಕ್ಷಿಣ ಪದವೀಧರ ಕ್ಷೇತ್ರದಲ್ಲಿಯೂ ಅವರು ಮತದಾರರ ವಿಶ್ವಾಸ ಕಳೆದುಕೊಂಡಿದ್ದಾರೆ.

ಕಳೆದ ಬಾರಿಯೂ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆ ಕಣಕ್ಕಿಳಿಸಿದ್ದ ವಾಟಾಳ್ ನಾಗರಾಜ್ ಸೋಲು ಕಂಡಿದ್ದರು. ಆದರೆ ಈ ಬಾರಿಯೂ ಸ್ಪರ್ಧಿಸಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.

Legislative Council Elections Vatal Nagaraj Loses Deposit

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 2008ರಲ್ಲಿ ಸೋತಿದ್ದ ವಾಟಾಳ್ ನಾಗರಾಜ್ ಪುನಃ ನಡೆದ ಎರಡು ಚುನಾವಣೆಗಳಲ್ಲಿಯೂ ಸೋಲು ಕಂಡಿದ್ದರು. ಈ ಬಾರಿ ವಿಧಾನ ಪರಿಷತ್ ಪ್ರವೇಶಿಸುವ ಅವರ ಕನಸು ನನಸಾಗಿಲ್ಲ.

ದಕ್ಷಿಣ ಪದವೀಧರರ ಕ್ಷೇತ್ರ, ಶಿಕ್ಷಕರ ಕ್ಷೇತ್ರ, ಮೈಸೂರು-ಚಾಮರಾಜನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ವಾಟಾಳ್ ನಾಗರಾಜ್ ಸೋಲು ಕಂಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ; ನಾಲ್ಕು ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿತ್ತು. ಗುರುವಾರ ನಾಲ್ಕೂ ಕ್ಷೇತ್ರದ ಫಲಿತಾಂಶದ ಅಂತಿಮ ಚಿತ್ರಣ ಸಿಕ್ಕಿದೆ. ಎರಡು ಸ್ಥಾನದಲ್ಲಿ ಬಿಜೆಪಿ, ಎರಡು ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳು ನಾಲ್ಕು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ 8 ಬಾರಿ ಗೆಲುವು ಸಾಧಿಸುವ ಮೂಲಕ ಅವರು ದಾಖಲೆ ಬರೆದಿದ್ದಾರೆ.

ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯಗಳಿಸಿದ್ದಾರೆ. ಹಿಂದೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅರುಣ ಶಹಾಪುರ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ 34,693 ಮತಗಳ ಅಂತರದಿಂದ ಕಾಂಗ್ರೆಸ್‌ನ ಸುನೀಲ ಸಂಕರನ್ನು ಸೋಲಿಸಿದ್ದಾರೆ.

ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದ್ದು, ಬಿಜೆಪಿಯ ಮೈ. ವಿ. ರವಿಶಂಕರ್ ಮತ್ತು ಜೆಡಿಎಸ್‌ ಅಭ್ಯರ್ಥಿ ಎಚ್. ರಾಮು ಸೋಲು ಕಂಡಿದ್ದಾರೆ.

Recommended Video

CM Bommai: ʼ777 ಚಾರ್ಲಿʼ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ | OneIndia Kannada

English summary
Kannada Chalavali Vatal party president Vatal Nagaraj lost deposit in legislative council elections. Congress candidate Madhu Made Gowda won elections elections from south graduate's constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X