ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಬಿನಿ ಜಲಾಶಯದಲ್ಲಿ ಚಿರತೆ ಮೃತದೇಹ ಪತ್ತೆ

By ಬಿ.ಎಂ.ಲವಕುಮಾರ್
|
Google Oneindia Kannada News

ಮೈಸೂರು, ಆಗಸ್ಟ್ 05 : ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಚಿರತೆ ಮೃತದೇಹ ಪತ್ತೆಯಾಗಿತ್ತು. ಕಳೆದ ವಾರ ಹುಲಿಯ ಮೃತದೇಹ ಪತ್ತೆಯಾಗಿತ್ತು.

ಸುಮಾರು ಐದು ವರ್ಷ ಪ್ರಾಯದ ಚಿರತೆ ಕಳೆದ ನಾಲ್ಕೈದು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ನೀರು ಕುಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಪ್ರಶ್ನೆಯೂ ಕಾಡುತ್ತಿದೆ.

ಕಬಿನಿ ಹಿನ್ನೀರಿನಲ್ಲಿ ಹುಲಿ ಸಂಶಯಾಸ್ಪದ ಸಾವು, ಅರಣ್ಯ ಇಲಾಖೆ ತನಿಖೆಕಬಿನಿ ಹಿನ್ನೀರಿನಲ್ಲಿ ಹುಲಿ ಸಂಶಯಾಸ್ಪದ ಸಾವು, ಅರಣ್ಯ ಇಲಾಖೆ ತನಿಖೆ

ಚಿರತೆ ಎಲ್ಲಿ ನೀರಿಗೆ ಬಿದ್ದಿದೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಮೃತದೇಹ ನೀರಿನಲ್ಲಿ ತೇಲಿಕೊಂಡು ಬಂದು ಜಲಾಶಯದ ಮುಖ್ಯ ದ್ವಾರದ ಬಳಿ ಕಾಣಿಸಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

Leopard found dead near Kabini dam

ವಿಷಯ ತಿಳಿದು ಸ್ಥಳಕ್ಕೆ ಡಿಎಫ್‍ಓ ಹನುಮಂತರಾಜು, ಎಸಿಎಫ್ ಪರಮೇಶ್ವರ್, ಆರ್‍ಎಫ್‍ಒ ಸಂದೀಪ್ ಭೇಟಿ ನೀಡಿ ಚಿರತೆಯ ಮೃತದೇಹವನ್ನು ಪರಿಶೀಲಿಸಿ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಿದ್ದಾರೆ.

ಬಂಡೀಪುರ: ಮನುಷ್ಯರ ತೆವಲಿಗೆ ವನ್ಯಪ್ರಾಣಿಗಳು ಬಲಿಯಾಗಬೇಕೇ?ಬಂಡೀಪುರ: ಮನುಷ್ಯರ ತೆವಲಿಗೆ ವನ್ಯಪ್ರಾಣಿಗಳು ಬಲಿಯಾಗಬೇಕೇ?

ಹುಲಿ ಶವ ಪತ್ತೆ : ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯ ಜೀವಿ ವಲಯದ ಕಾಡಂಚಿನ ಎನ್. ಬೆಳತ್ತೂರು ಗ್ರಾಮದ ಹಳೆ ಕಾರಾಪುರ ರಸ್ತೆಯ ಬಳಿ ಕಬಿನಿ ಹಿನ್ನೀರಿನಲ್ಲಿ ಹುಲಿಯ ಶವ ಕಳೆದ ವಾರ ಪತ್ತೆಯಾಗಿತ್ತು.

ಸುಮಾರು ನಾಲ್ಕೂವರೆ ವರ್ಷ ಪ್ರಾಯದ ಹೆಣ್ಣು ಹುಲಿ ಎರಡು ದಿನಗಳ ಹಿಂದೆ ಮೃತ ಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು.

English summary
A leopard was found dead close to Kabini dam on Saturday, August 4, 2018. The Forest Department officials suspected that, leopard died about four days ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X