• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲೆಯಲ್ಲಿ ಜೂ.14ರ ನಂತರವೂ ಲಾಕ್‌ಡೌನ್ ವಿಸ್ತರಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 10: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ, ಮೈಸೂರು ಜಿಲ್ಲೆಯಾದ್ಯಂತ ಸೋಂಕು ಹರಡುವಿಕೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ.14 ರಿಂದ 21ರವರೆಗೆ ಲಾಕ್‌ಡೌನ್ ಮುಂದುವರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ""ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಜೂನ್ 14ರ ನಂತರವೂ ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ. ಆದರೆ, ಯಾವುದಕ್ಕೆ ವಿನಾಯಿತಿ ಕೊಡಬೇಕು ಎಂಬುದರ ಕುರಿತು ಚರ್ಚಿಸಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದ್ದಾರೆ'' ಎಂದರು.

""ಅನ್‌ಲಾಕ್ ಮಾಡಬೇಕಿದ್ದರೆ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕೆಂಬ ನಿಯಮವಿದೆ. ಆದರೆ ಸದ್ಯ ಮೈಸೂರಿನಲ್ಲಿಗ ಶೇ.20ರಷ್ಟು ಪಾಸಿಟಿವಿಟಿ ರೇಟ್ ಇದೆ. ಹೀಗಾಗಿ ಇದನ್ನು ಅತೀ ಶೀಘ್ರದಲ್ಲಿ ಶೇ.5ಕ್ಕೆ ಇಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ'' ಎಂದು ಸೂಚಿಸಿದರು.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಎಸ್ಪಿ ಒಂದೇ ಕಾರಿನಲ್ಲಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ. ಮೈಸೂರಿನ ಎಲ್ಲಾ 11 ಕ್ಷೇತ್ರಗಳಿಗೂ ಒಟ್ಟಿಗೆ ಭೇಟಿ ಕೊಟ್ಟು ಕೊರೊನಾ ಸೋಂಕಿನ ಪರಿಸ್ಥಿತಿ ತಹಬದಿಗೆ ತರಲಿದ್ದಾರೆ ಎಂದು ತಿಳಿಸಿದರು.

English summary
Mysuru district Incharge minister ST Somashekhar said that lockdown extension another 1 week in the Mysuru District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X