Bhaskar Rao: ಮೈಸೂರು ಲೋಕಸಭಾ ಕ್ಷೇತ್ರದ ಮೇಲೆ ಭಾಸ್ಕರ್ ರಾವ್ ಕಣ್ಣು, ಬ್ರಾಹ್ಮಣರೊಂದಿಗೆ ಸಭೆ
ಮೈಸೂರು, ಫೆಬ್ರವರಿ.25: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಸಕತ್ ಜೋರಾಗಿಯೇ ಇದೆ. ಟಿಕೆಟ್ ಆಕಾಂಕ್ಷಿಗಳು ಪಕ್ಷಗಳ ಮೇಲೆ ಒತ್ತಡ ಹಾಕಲು ಹಲವು ಯೋಜನೆಗಳನ್ನು ಹೂಡುತ್ತಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದ ಮೇಲೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಸಮುದಾಯದ ಜೊತೆಗೆ ಸಭೆ ನಡೆಸಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಶನಿವಾರ ಮೈಸೂರಿನಲ್ಲಿ ವಿವಿಧ ಬ್ರಾಹ್ಮಣ ಸಂಘಟನೆಗಳ ಪ್ರತಿನಿಧಿಗಳೊಂದಿಗೆ 2024 ರ ಲೋಕಸಭಾ ಚುನಾವಣೆಯ ಬಗ್ಗೆ ಸಂವಾದ ನಡೆಸಿದ್ದಾರೆ. 2024 ರ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ಮೈಸೂರು ವಿಪ್ರ ಬಳಗ, ಚಾಮುಂಡಿಪುರಂ ಆಯೋಜಿಸಿದ್ದ ವಿಪ್ರ ಸಂಗಮ 2024 ರ ಸಂವಾದ ಸಭೆಯಲ್ಲಿ ಭಾಸ್ಕರ್ ರಾವ್ ಅವರು ತಮ್ಮ ಸೇವೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಯನ್ನು ವಿವರಿಸುವ ಕಿರುಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.

ತಾವು ಮೈಸೂರು ಮೂಲದವರು ಎನ್ನುತ್ತಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಲು ಬ್ರಾಹ್ಮಣ ಸಮುದಾಯದ ಬೆಂಬಲವನ್ನು ಕೋರಿದ್ದಾರೆ ಭಾಸ್ಕರ್ ರಾವ್. ನಂಜನಗೂಡು ತಾಲೂಕಿನ ಕಳಲೆ ಗ್ರಾಮವು ತಮ್ಮ ಜನ್ಮಸ್ಥಳವಾಗಿದ್ದು, ತಾನು ಮೈಸೂರು ಮೂಲದವರು ಎಂದು ಹೇಳಿದ್ದಾರೆ.
ತನ್ನ ಪೂರ್ವಜರು ಮೈಸೂರಿನವರು ಎಂದಿರುವ ಅವರು, ತನ್ನ ಅಜ್ಜ ಮೊದಲ ಮಹಾಯುದ್ಧದಲ್ಲಿ ಭಾಗವಹಿಸಿದ್ದರು ಎಂದೂ ಸಭೆಯಲ್ಲಿ ತಿಳಿಸಿದ್ದಾರೆ. ತಾನು ಪೊಲೀಸ್ ಇಲಾಖೆಯಲ್ಲಿ 34 ವರ್ಷಗಳ ಕಾಲ ಯಾವುದೇ ಕಳಂಕವಿಲ್ಲದೆ ಸೇವೆ ಸಲ್ಲಿಸಿರುವುದಾಗಿಯೂ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಿಯೋಜನೆಗೊಡು ಕೆಲಸ ಮಾಡಿರುವುದಾಗಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕೆಲ ಬ್ರಾಹ್ಮಣ ಸಂಘಟನೆಗಳ ಪ್ರತಿನಿಧಿಗಳು, ಇದುವರೆಗೆ ಬ್ರಾಹ್ಮಣರು ಈ ಕ್ಷೇತ್ರವನ್ನು ಪ್ರತಿನಿಧಿಸದ ಕಾರಣ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಭಾಸ್ಕರ್ ರಾವ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಮಾಜಿ ಐಪಿಎಸ್ ಅಧಿಕಾರಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕಳೆದ 10 ವರ್ಷಗಳಿಂದ ಕ್ಷೇತ್ರದ ಸಂಸದರಾಗಿ ತಾವು ಮಾಡಿದ ಸಾಧನೆಗಳ ಕುರಿತು ಕಿರುಪುಸ್ತಕವನ್ನು ವಿತರಿಸುತ್ತಿದ್ದು, ಇದೇ ವೇಳೆ ತಮ್ಮ ಪರವಾಗಿ ಬ್ರಾಹ್ಮಣ ಸಮುದಾಯವನ್ನು ಒಗ್ಗೂಡಿಸಲು ಭಾಸ್ಕರ್ ರಾವ್ ಪ್ರಯತ್ನ ಪಡುತ್ತಿದ್ದಾರೆ.
2019ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಸೋತ ನಂತರ ಬಿಜೆಪಿಗೆ ಮರಳಿದ ವಿಜಯಶಂಕರ್ ಕೂಡ ಪಕ್ಷದ ಟಿಕೆಟ್ ಬಯಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಪ್ರಾದೇಶಿಕ ಪಕ್ಷಕ್ಕೆ ಕ್ಷೇತ್ರದ ಮೇಲೆ ಹಿಡಿತವಿದ್ದು, ಮಾಜಿ ಸಚಿವ ಎಸ್.ಆರ್. ಮಹೇಶ್ ಕೂಡ ಕಣದಲ್ಲಿದ್ದಾರೆ. ಆದರೆ, ಸೀಟು ಹಂಚಿಕೆ ಅಂತಿಮಗೊಂಡ ನಂತರ ಜೆಡಿಎಸ್ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ನಿರೀಕ್ಷೆಯಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications