ಮೈಸೂರಿನ ಶನಿವಾರದ ಅಪರಾಧ ಸುದ್ದಿಗಳ ರೌಂಡಪ್
ಮೈಸೂರು, ಮಾರ್ಚ್ 4 : ವ್ಯಾಪಾರದಲ್ಲಿ ನಷ್ಟವುಂಟಾದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವನನ್ನು ಮಂಡಿಮೊಹಲ್ಲಾ ನಿವಾಸಿ ಪ್ರಕಾಶ್(40) ಎಂದು ಗುರುತಿಸಲಾಗಿದೆ. ಈತ ಮೈಸೂರು-ತಿ.ನರಸೀಪುರ ರಸ್ತೆಯಲ್ಲಿನ ಆಲನಹಳ್ಳಿ ಬಡಾವಣೆಯಲ್ಲಿ ಪ್ರಕಾಶ್ ಇಲೆಕ್ಟ್ರಿಕಲ್ಸ್ ಮಳಿಗೆಯನ್ನು ನಡೆಸುತ್ತಿದ್ದ ಎನ್ನಲಾಗಿದೆ.

ಆದರೆ ಕೆಲವು ದಿನಗಳಿಂದ ವ್ಯಾಪಾರದಲ್ಲಿ ನಷ್ಟವುಂಟಾಗಿದೆ ಎಂದು ಬೇಸರದಲ್ಲಿದ್ದ ಎಂದು ತಿಳಿದು ಬಂದಿದೆ. ಶುಕ್ರವಾರ ತನ್ನ ಮಳಿಗೆಯ ಹಿಂದುಗಡೆ ಇರುವ ಜಾಗದಲ್ಲಿ ನೇಣಿಗೆ ಶರಣಾಗಿದ್ದಾನೆ. ಅಂಗಡಿ ತೆರೆದಿಟ್ಟು ಹೊರಹೋದಾತ ಬಹಳ ಸಮಯವಾದರೂ ಹಿಂದಿರುಗಿ ಬಾರದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರು ಬಂದು ನೋವಿದಾಗ ಆತ ನೇಣಿಗೆ ಶರಣಾಗಿರುವುದು ಕಂಡು ಬಂತು.
ಸ್ಥಳಕ್ಕೆ ಆಲನಹಳ್ಳಿ ಠಾಣೆಯ ಇನ್ಸಪೆಕ್ಟರ್ ಶೇಖರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಕ್ಷಿಣೆ ಕಿರುಕುಳ : ಮಗಳನ್ನು ನೇಣಿಗೇರಿಸಿದ್ದಾರೆಂದು ಹೆತ್ತವರ ಆರೋಪ
ಮಗಳಿಗೆ ಗಂಡ, ಮಾವ, ಅತ್ತೆ ವರದಕ್ಷಿಣೆ ಕಿರುಕುಳ ನೀಡಿದ್ದು ಮಾತ್ರವಲ್ಲದೇ ಹೊಡೆದು ನೇಣಿಗೇರಿಸಿದ್ದಾರೆ ಎಂದು ಆರೋಪಿಸಿ ಹೆತ್ತವರು ಗೋಳಿಡುತ್ತಿದ್ದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತ ದುರ್ದೈವಿ ಮಹಿಳೆಯನ್ನು ಕುರುಬಗೇರಿ ನಿವಾಸಿ ಅಮೃತ (22) ಎಂದು ಗುರುತಿಸಲಾಗಿದೆ. ಅಮೃತ ಕೆ. ಆರ್. ನಗರ ತಾಲೂಕು ಅಡಗೂರಿನ ಧರ್ಮೇಶ್ ಹಾಗೂ ಲಕ್ಷ್ಮಿ ದಂಪತಿ ಪುತ್ರಿಯಾಗಿದ್ದು, ಕಳೆದ ಒಂದೂವರೆ ವರ್ಷದ ಹಿಂದೆ ಮೈಸೂರಿನ ಕುರುಬಗೇರಿಯ ಸೋಮಣ್ಣ ಹಾಗೂ ಅನ್ನಪೂರ್ಣ ದಂಪತಿ ಪುತ್ರ ವಿನಯ್ ಎಂಬಾತನಿಗೆ ಕೊಟ್ಟು ಅದ್ಧೂರಿಯಾಗಿ ವಿವಾಹ ಮಾಡಿಕೊಡಲಾಗಿತ್ತು.
ಇತ್ತೀಚೆಗೆ ವಿನಯ್ ಹಾಗೂ ಆತನ ಮನೆಯವರು ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದರು. ಶುಕ್ರವಾರ ಮಧ್ಯಾಹ್ನ ತಮ್ಮ ಮಗಳನ್ನು ಸಾಯಿಸಿ ನೇಣುಹಾಕಿದ್ದಾರೆ ಎಂದು ಅಮೃತ ಪೋಷಕರು ಆರೋಪಿಸುತ್ತಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅಮೃತ ಅತ್ತೆ ನಾಗರತ್ನ, ಮಾವ ಸೋಮಣ್ಣ ಹಾಗೂ ಪತಿ ವಿನಯ್ ಪರಾರಿಯಾಗಿದ್ದಾರೆ. ಅಮೃತ ಪೋಷಕರು ಸ್ಥಳಕ್ಕೆ ತಹಶೀಲ್ದಾರ್ ರು ಬರುವಂತೆ ಪಟ್ಟು ಹಿಡಿದಿದ್ದಾರೆ.
ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಲೆಯ ಮೇಲೆ ಮಾರ್ಬಲ್ ಬಿದ್ದು ವ್ಯಕ್ತಿ ಸಾವು
ತಲೆ ಮೇಲೆ ಮಾರ್ಬಲ್ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಮೈಸೂರಿನ ನಂಜುಮಳಿಗೆಯ ಬಳಿ ನಡೆದಿದೆ. ಮೃತನನ್ನು ಎಚ್.ಡಿ.ಕೋಟೆ ತಾಲೂಕಿನ ಚಿಕ್ಕ ನಂದಿ ನಿವಾಸಿ ಗಿರೀಶ್ (26) ಎಂದು ಗುರುತಿಸಲಾಗಿದೆ. ಈತ ನಂಜುಮಳಿಗೆಯ ಬಳಿಯಿದ್ದ ರಾಜಸ್ಥಾನ್ ಮಾರ್ಬಲ್ಸ್ ನಲ್ಲಿ ಲಾರಿಯಿಂದ ಮಾರ್ಬಲ್ ಇಳಿಸುವಾಗ ಆಯತಪ್ಪಿ ಗಿರೀಶ್ ಮೇಲೆ ಮಾರ್ಬಲ್ ಬಿದ್ದಿದ್ದು, ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ದುರ್ಘಟನೆ ಸಂಭವಿಸುತ್ತಿದ್ದಂತೆ ರಾಜಸ್ಥಾನ್ ಮಾರ್ಬಲ್ಸ್ ಮಾಲಿಕರು ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಲಕ್ಷ್ಮಿಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬಿಕರ ಆಕ್ರಂದನ ಮುಗಿಲು ಮುಟ್ಟಿದೆ. ಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications