ಪ್ರೀತಿ ಮಾಡ್ಬೇಡಿ ಅಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ಮೈಸೂರು, ಆಗಸ್ಟ್ 5: ಪ್ರೀತಿ ಮಾಡಬೇಡಿ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಬೇಸರಗೊಂಡು ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದ ಹೆಮ್ಮಿಗೆ ಸೇತುವೆ ಬಳಿ ನಡೆದಿದೆ.

ಮನು (21) ಹಾಗೂ ದೀಪಶ್ರೀ (16) ಆತ್ಮಹತ್ಯೆ ಮಾಡಿಕೊಂಡವರು. ಮನು ನಂಜನಗೂಡಿನ ಕಾಮಹಳ್ಳಿ ಗ್ರಾಮದ ಯುವಕನಾಗಿದ್ದು, ದೀಪಶ್ರೀ ಟಿ. ನರಸೀಪುರದ ಶ್ರೀರಾಂಪುರ ಗ್ರಾಮ ನಿವಾಸಿ. ದೀಪಶ್ರೀ ಟಿ.ನರಸೀಪುರದ ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಕೆಲವು ದಿನಗಳಿಂದ ದೀಪಶ್ರೀ ಹಾಗೂ ಮನು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಚಾರ ಅರಿತ ಇಬ್ಬರ ಪೋಷಕರೂ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಮನನೊಂದು ಈ ಪ್ರೇಮಿಗಳು ಮೈಸೂರಿನ ತಲಕಾಡಿನ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Lovers Committed Suicide In T Narasipura

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನು ವಿಡಿಯೋ ಚಿತ್ರೀಕರಿಸಿದ್ದಾನೆ. ತೀವ್ರ ಶೋಧನೆಯ ಬಳಿಕ ಇಬ್ಬರ ಶವಗಳು ಪತ್ತೆಯಾಗಿದೆ. ಈ ಬಗ್ಗೆ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+