ಎಚ್‌.ಡಿ. ಕುಮಾರಸ್ವಾಮಿ ಕೂಡ ಮುಡಾದಿಂದ ಬದಲಿ ನಿವೇಶ ಪಡೆದಿದ್ದಾರೆ: ಎಂ. ಲಕ್ಷ್ಮಣ್‌ ಆರೋಪ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಪ್ಪು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಶೀಘ್ರವೇ ದಾಖಲೆ ಬಿಡುಗಡೆ ಮಾಡುವೆ ಎಂದು ಹೇಳಿದರು.

M Laxman claims hd kumaraswamy seat replacement

ಬಿಜೆಪಿ ನಾಯಕರು ಜಮೀನಿನ ಮೂಲ ಮಾಲೀಕ ಎನ್ನುತ್ತಿರುವ ನಿಂಗ ಎಂಬುವರ ಮೊಮ್ಮಕ್ಕಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ದೂರು ಕೊಡಿಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಪ್ಪಿತಸ್ಥರು ಎಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್‌ ನಾಯಕರ ಪಾಲಿದೆ

ಮುಡಾ ಹಗರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾತ್ರವೇ ಹೆಚ್ಚಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲು ಕೂಡ ಇದೆ. ಸಂಬಂಧಿಕರ ಮುಖಾಂತರ ವಿಜಯೇಂದ್ರ ಅಕ್ರಮ ಎಸಗಿದ್ದಾರೆ ಎಂದು ದೂರಿದರು.

ಮೈಸೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಜನರು ಸಂಕಷ್ಟಕ್ಕೆ ಸಿಲುಕಿರುವುದು ಸಂಸದರಿಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದರು.

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಯದುವೀರ್ ಅವರಿಗೆ 65 ಸಾವಿರ ಮತಗಳು ಬಂದಿವೆ. ಆ ಭಾಗದಲ್ಲಿಯೂ ಅಭಿವೃದ್ಧಿಗೆ ಗಮನಹರಿಸಬೇಕು. ನಮ್ಮ ಸರಕಾರ ಇದ್ದಾಗ ನರ್ಮ್ ಯೋಜನೆಯಡಿ 2 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದೆವು. ನೀವು ಅಭಿವೃದ್ಧಿಯತ್ತ ಗಮನ ಕೊಡಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+