ಮಡಿಕೇರಿ ಗಲಭೆ : ಗುಂಡೇಟು ತಿಂದಿದ್ದ ಶಾಹುಲ್ ಸಾವು

ಮೈಸೂರು, ನವೆಂಬರ್ 12 : ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಗುಂಡೇಟೆನಿಂದ ಗಾಯಗೊಂಡಿದ್ದ ಶಾಹುಲ್ ಎಂಬ ಯುವಕ ಗುರುವಾರ ಮೃತಪಟ್ಟಿದ್ದಾನೆ. ಮಡಿಕೇರಿಯಲ್ಲಿ ನಡೆದ ಘರ್ಷಣೆಯಲ್ಲಿ ಇದುವರೆಗೂ 3 ಜನರು ಸಾವನ್ನಪ್ಪಿದ್ದಾರೆ.

ನವೆಂಬರ್ 10ರ ಮಂಗಳವಾರ ಟಿಪ್ಪು ಜಯಂತಿ ಆಚರಣೆಯ ವೇಳೆ ಮಡಿಕೇರಿಯಲ್ಲಿ ಘರ್ಷಣೆ ನಡೆದಿತ್ತು. ಅಂದು ಮಡಿಕೇರಿಯ ಹೊರವಲಯದಲ್ಲಿ ಹೋಗುತ್ತಿದ್ದ ವೇಳೆ, ಶಾಹುಲ್ (25) ಮೇಲೆ, ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದರು. [ಕುಟ್ಟಪ್ಪ ಸಾವು: ಆಕಸ್ಮಿಕವೋ, ಪೂರ್ವ ನಿಯೋಜಿತವೋ?]

Shahul

ಮಡಿಕೇರಿ ಆಸ್ಪತ್ರೆಯಲ್ಲಿ ಶಾಹುಲ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಶಾಹುಲ್ ಮೃತಪಟ್ಟಿದ್ದಾನೆ. ಶಾಹುಲ್ ಮೇಲೆ ಗುಂಡಿನ ದಾಳಿ ನಡೆಸಿದವರು ಯಾರು? ಎಂಬುದು ಇನ್ನೂ ನಿಗೂಢವಾಗಿದೆ.[ಕೊಡಗು: ಶಾಂತಿ ಕಾಪಾಡುವಂತೆ ಪರಮೇಶ್ವರ ಮನವಿ]

ಶಾಹುಲ್ ಶವವನ್ನು ಖಾಸಗಿ ಆಸ್ಪತ್ರೆಯಿಂದ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. [ಮಡಿಕೇರಿ ಗಲಭೆ : ಕುಟ್ಟಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ]

ಶಾಹುಲ್ ಮೃತಪಟ್ಟಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮಡಿಕೇರಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಘರ್ಷಣೆ ಬಳಿಕ ಪ್ರಕ್ಷುಬ್ಧವಾಗಿದ್ದ ಮಡಿಕೇರಿ ಇಂದು ಸಹಜ ಸ್ಥಿತಿಯತ್ತ ಮರಳುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+