ಮೈಸೂರಿನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳ 75 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಆಶ್ರಮಕ್ಕೆ ಆಗಮಿಸಿ, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ಆಶೀರ

ಮೈಸೂರು, ಮೇ 26 : ಮೋದಿ ಸರ್ಕಾರ ಸಮಾಜದ ಎಲ್ಲ ವರ್ಗಗಳ, ಎಲ್ಲ ಕ್ಷೇತ್ರಗಳ ಹಿತ ಕಾಯುತ್ತಾ ಬಂದಿದೆ. ಇಡೀ ಜಗತ್ತನ್ನೇ ಆಕರ್ಷಿಸುವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ. ಅವರ ನೇತೃತ್ವದಲ್ಲಿ ಭಾರತ ಇನ್ನಷ್ಟು ಸದೃಢವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಹೇಳಿದದರು.

ಅವರು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳ 75 ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಆಶ್ರಮಕ್ಕೆ ಆಗಮಿಸಿ, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Maharashtra CM Devendra Fadnavis in Mysuru

'ನನಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ. ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ಆರೋಗ್ಯ ಭಾಗ್ಯ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಶ್ರೀಗಳಿಗೆ ಪ್ರಾಣಿ ಪಕ್ಷಿಗಳ ಮೇಲೆ ಅಗಾಧವಾದ ಪ್ರೀತಿ. ಆಶ್ರಮದಲ್ಲಿ ಸಾವಿರಾರು ಪ್ರಾಣಿ-ಪಕ್ಷಿಗಳನ್ನು ಸಾಕುವ ಮೂಲಕ ಗಿನ್ನಿಸ್ ದಾಖಲೆ ಮಾಡಿದ್ದಾರೆ. ಅಲ್ಲದೇ ಸಾಕಷ್ಟು ಸಾಮಾಜಿಕ‌ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ' ಎಂದು ಸ್ಮರಿಸಿದರು.

Maharashtra CM Devendra Fadnavis in Mysuru

ಸ್ವಾಮೀಜಿಗಳ 100ನೇ ವರ್ಷದ ಹುಟ್ಟುಹಬ್ಬಕ್ಕೂ ನಾನು ಆಶ್ರಮಕ್ಕೆ ಬರುತ್ತೇನೆ ಎಂದು ಹೇಳುವುದಕ್ಕೆ ಸಹ ಅವರು ಮರೆಯಲಿಲ್ಲ.

ದುರದೃಷ್ಟದಿಂದ ಪಾರಾದೆ :
ಇನ್ನು ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್ , ನಿನ್ನೆ(ಮೇ 25) ಲಾತೂರು ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅವಘಡ ಸಂಭವಿಸಿತ್ತು. ನಿಲಂಗಾ ಪಟ್ಟಣದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವ ವೇಳೆ ಹೆಲಿಪ್ಯಾಡ್ ಮೇಲೇರುತ್ತಿದ್ದಂತೆ ಪ್ರತಿಕೂಲ ವಾತಾವರಣವಿತ್ತು. ಪೈಲಟ್ ಹೆಲಿಕ್ಯಾಪ್ಟರ್ ಕೆಳಗಳಿಸುವ ವೇಳೆ ದುರಂತ ನಡೆದಿದೆ. ಅದೃಷ್ಟವಶಾತ್ ಇಬ್ಬರು ಪೈಲಟ್ ಸೇರಿ ಆರು ಮಂದಿ ಬಚಾವ್ ಆಗಿದ್ದೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+