Makar Sankranti 2023: ಮೈಸೂರಿನಲ್ಲಿ ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್
ಮೈಸೂರು, ಜನವರಿ, 16: ಭಾನುವಾರ (ಜನವರಿ 15) ಮುಂಜಾನೆಯಿಂದಲೇ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದ ಸಾರ್ವಜನಿಕರು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬ ಆಚರಿಸಿದರು. ಸುಗ್ಗಿ ಹಬ್ಬದ ಅಂಗವಾಗಿ ನಗರದ ಹಲವೆಡೆ ಗೋ ಪೂಜೆ ಮಾಡಲಾಯಿತು. ಎಳ್ಳು-ಬೆಲ್ಲ, ಬಾಳೆಹಣ್ಣು ಇನ್ನಿತರೆ ಪದಾರ್ಥಗಳನ್ನು ಗೋವುಗಳಿಗೆ ತಿನ್ನಿಸಿ ಭಕ್ತಿ ಭಾವ ಮೆರೆದರು. ಹಾಗೆಯೇ ಮೇಯರ್ ಶಿವಕುಮಾರ್ ಅವರು ಪೌರ ಕಾರ್ಮಿಕರೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.
ಪೌರ ಕಾರ್ಮಿಕರೊಂದಿಗೆ ಹಬ್ಬ ಆಚರಣೆ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ಮೈಸೂರು ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ಹಬ್ಬದ ದಿನವೂ ಮೈಸೂರು ನಗರದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ಹಬ್ಬ ಆಚರಣೆ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ,'' ಎಂದರು. ''ನಗರ ಪಾಲಿಕೆಯ ಎಲ್ಲಾ ಪೌರ ಕಾರ್ಮಿಕರಿಗೆ ಹಬ್ಬದ ಪ್ರಯುಕ್ತ ಸಮವಸ್ತ್ರ, ಶೂ ಮತ್ತು ಹ್ಯಾಂಡ್ ಶೂ ವಿತರಣೆ ಮಾಡಲಾಗುವುದು,'' ಎಂದು ಹೇಳಿದರು. ಬಳಿಕ ಎಲ್ಲಾ ವಾರ್ಡ್‌ಗಳಲ್ಲಿ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ವ್ಯವಸ್ಥೆ ಮಾಡಲಾಯಿತು.
ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ ವಿನಿಮಯ
ಇನ್ನು ಸಂಜೆಯಾಗುತ್ತಿದ್ದಂತೆ ಮಹಿಳೆಯರು, ಯುವತಿಯರು ಹಾಗೂ ಪುಟಾಣಿಗಳು ಸಂಬಂಧಿಕರು, ಬಂಧು-ಮಿತ್ರರು ಹಾಗೂ ನೆರೆಹೊರೆಯವರ ಮನೆಗಳಿಗೆ ತೆರಳಿ ಎಳ್ಳು, ಬೆಲ್ಲ ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು.

ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ, ಒಂಟಿ ಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನ ಸೇರಿದಂತೆ ಬಹುತೇಕ ಎಲ್ಲಾ ದೇವಸ್ಥಾನಗಳಿಗೆ ಭೇಟಿ ನೀಡಿದ ಸಾರ್ವಜನಿಕರು ದೇವರ ದರ್ಶನ ಪಡೆದರು. ಇದರಿಂದ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕಿತ್ತಿದ್ದವು.
ಜಾನುವಾರುಗಳಿಗೆ ಅಲಂಕಾರ
ರೈತರ ಪಾಲಿಗೆ ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿ ಪ್ರಯುಕ್ತ ದನಕರುಗಳನ್ನು ತೊಳೆದು ಅಲಂಕಾರ ಮಾಡಲಾಗಿತ್ತು. ನಗರ ಪ್ರದೇಶದಲ್ಲೂ ಗ್ರಾಮೀಣ ಸೊಗಡು ಉಳಿಸಿಕೊಂಡಿರುವ ಕೆ.ಜಿ.ಕೊಪ್ಪಲು, ತೊಣಚಿ ಕೊಪ್ಪಲು, ಕುಂಬಾರ ಕೊಪ್ಪಲು, ಪಡುವಾರಹಳ್ಳಿ ಮುಂತಾದೆಡೆ ಹಬ್ಬ ಕಳೆಗಟ್ಟಿತ್ತು. ಈ ಪ್ರದೇಶಗಳಲ್ಲಿ ಜಾನುವಾರುಗಳನ್ನು ಬೆಳಗ್ಗೆಯೇ ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಬಳಿದು ಸಿಂಗರಿಸಿ ಪೂಜಿಸಿದರು. ಇದರೊಂದಿಗೆ ಗ್ರಾಮಾಂತರ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕಿಚ್ಚು ಹಾಯಿಸುವ ಮೂಲಕ ಸಂಕ್ರಾಂತಿ ಆಚರಣೆ ಮಾಡಲಾಯಿತು.

ಶ್ರೀರಾಂಪುರದ ಶಿವನ ದೇವಾಲಯದಲ್ಲಿ ಭಕ್ತರಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರು ಎಳ್ಳು-ಬೆಲ್ಲ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಎಂ.ಸುನೀಲ್, ಮುಖಂಡರಾದ ಪರಮೇಶ್, ಮೊಗಣ್ಣಾಚಾರ್, ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications