ಟ್ರಿಣ್ ಟ್ರಿಣ್ ಪರಿಸರ ಸ್ನೇಹಿ ಸೈಕಲ್ ತುಳಿದ ಮೈಸೂರಿನ ಡಿಸಿ
ಮೈಸೂರು, ಜನವರಿ 12 : ಟ್ರಿಣ್ ಟ್ರಿಣ್ ಪರಿಸರ ಸ್ನೇಹಿ ಬೈಸಿಕಲ್ ಯೋಜನೆಯನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಹಾಗೂ ಪಾಲಿಕೆ ಆಯುಕ್ತ ಜೆ.ಜಗದೀಶ್ ಬೈಸಿಕಲ್ ತುಣಿದು ಪರಿಶೀಲಿಸಿದರು.
ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿರುವ ಪರಿಸರ ಸ್ನೇಹಿ ಬೈಸಿಕಲ್ ಯೋಜನೆಯನ್ನು ಜಿಲ್ಲಾಧಿಕಾರಿ ರಂದೀಪ್, ಪಾಲಿಕೆ ಆಯುಕ್ತರಾದ ಜಗದೀಶ್ ಹಾಗೂ ಮೇಯರ್ ರವಿಕುಮಾರ್ ಅವರು ಮೈಸೂರಿನ ಆರ್ ಟಿಓ ವೃತ್ತದ ಬಳಿ ಇರುವ ಸೈಕಲ್ ಪಾಯಿಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇವೇಳೆ ಯೋಜನೆಯ ಮುಖ್ಯಸ್ಥ ಚಿರಂತ್ ಬಳಿ ಚರ್ಚಿಸಿ ಸ್ವತ: ಜಿಲ್ಲಾಧಿಕಾರಿ,ಪಾಲಿಕೆ ಆಯುಕ್ತರು ಸೇರಿದಂತೆ ಮೇಯರ್ ರವಿಕುಮಾರ್ ಅವರು ಸೈಕಲ್ ಹೊಡೆಯುವ ಮೂಲಕ ಪರಿಶೀಲನೆ ನಡೆಸಿದರು.[ಮಂಗಳೂರು : ಸೆ.22ರಂದು ಕಾರು ಬಿಡಿ, ಸೈಕಲ್ ತುಳಿಯಿರಿ]

ನೂತನ ಯೋಜನೆಯಲ್ಲಿ 450 ಸೈಕಲ್ ಗಳಿದ್ದು, 20ಕ್ಕೂ ಹೆಚ್ಚು ಸೈಕಲ್ ಕೇಂದ್ರಗಳನ್ನು ತೆರೆಯಲಾಗಿದೆ. ಸೈಕಲ್ ಕೊಳ್ಳಲು ಮಾನದಂಡಗಳಿದ್ದು, ಅದು ತುಂಬ ಸುಲಭವಾಗಿದೆ. ವರ್ಷಕ್ಕೆ ಸದಸ್ಯರು ರು 1000 ಪಾವತಿಸಿದರೆ ಅವರಿಗೆ ಆಕರ್ಷಕ ರಿಯಾಯಿತಿಯೊಂದಿಗೆ ನೀಡಲಾಗುತ್ತಿದೆ. ಸೈಕಲ್ ಪಾಯಿಂಟ್ ಗಳಲ್ಲೇ ಸೈಕಲ್ ಗಳಿದ್ದು ಕಳ್ಳತನವಾಗುವ ಭಯವೂ ಇಲ್ಲ. ಎಲ್ಲವೂ ತಂತ್ರಜ್ಞಾನದ ಮೂಲಕ ಅಳವಡಿಸಿದ್ದು, ಕೇಂದ್ರ ಸುತ್ತ ಸಿಸಿಟಿವಿ ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೊಂದು ವಿನೂತನ ಯೋಜನೆ. ಮೊದಲಿಗೆ ಎಲ್ಲರಿಗೂ ರಿಯಾಯಿತಿ ದರದಲ್ಲಿ ಈ ಯೋಜನೆ ನೀಡುತ್ತಿದ್ದೇವೆ. ಚಾಮುಂಡಿ ಬೆಟ್ಟಕ್ಕೆ ಗೇರ್ ಸೈಕಲ್ ನೀಡಿದ್ದು, ನಗರಕ್ಕೆ ಮಾತ್ರ ವಿತೌಟ್ ಗೇರ್ ಸೈಕಲ್ ಇದೆ. ಇದೇ ತಿಂಗಳ ಕೊನೆಯಲ್ಲಿ ಈ ಯೋಜನೆ ಜನಸಾಮಾನ್ಯರನ್ನು ತಲುಪಿಸಲಿದ್ದೇವೆ. ಸೈಕಲ್ ಏರಿ ತಮ್ಮ ಬಾಲ್ಯದ ನೆನಪು ಹಾಗೂ ಆರೋಗ್ಯ ವೃದ್ಧಿಸಿಕೊಳ್ಳುವ ಅವಕಾಶ ಜನರಿಗೆ ಸಿಗಲಿದೆ. ಆಧಾರ ಕಾರ್ಡ್ ಲಿಂಕ್ ಮಾಡುವ ವ್ಯವಸ್ಥೆ ಇದ್ದು, ಮನಿ ಕಾರ್ಡ್ ರೀತಿಯಲ್ಲಿ ಸೈಕಲ್ ಪಡೆಯುವುದಕ್ಕೂ ಕಾರ್ಡ್ ನೀಡಲಾಗುತ್ತದೆ ಸಂಸ್ಥೆಯ ಚಿರಂತ್ ತಿಳಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications